ಭ್ರಷ್ಟಾಚಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ: ಯೋಗಿ ವಿರುದ್ಧ ಗುಡುಗಿದ ಯುಪಿ ಸಚಿವ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವೇ ಗುಡುಗಿರುವ ಬಿಜೆಪಿ ಮಿತ್ರ ಪಕ್ಷದ ಸಚಿವರೊಬ್ಬರು,....

Published On :
ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧವೇ ಗುಡುಗಿರುವ ಬಿಜೆಪಿ ಮಿತ್ರ ಪಕ್ಷದ ಸಚಿವರೊಬ್ಬರು, ಯೋಗಿ ಆಡಳಿತದ ವೈಖರಿಯನ್ನು ಬಹಿರಂಗವಾಗಿಯೇ ಟೀಕಿಸಿದ್ದಾರೆ.
ಯೋಗಿ ಆಗಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರವೂ ರಾಜ್ಯದಲ್ಲಿ ಭ್ರಷ್ಟಾಚಾರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯೋಗಿ ಸಂಪುಟದ ಸಚಿವ ಹಾಗೂ ಸುಹೆಲ್ದೇವ್ ಭಾರತ ಸಮಾಜ ಪಕ್ಷ(ಸಿಬಿಎಸ್ಪಿ) ಅಧ್ಯಕ್ಷ ಓಂ ಪ್ರಕಾಶ್ ರಾಜಭರ್ ಅವರು ಆರೋಪಿಸಿದ್ದಾರೆ.
ಭ್ರಷ್ಟ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ತಾವು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಸಹ ರಾಜಭರ್ ಅವರು ಎಚ್ಚರಿಸಿದ್ದಾರೆ. ಅಲ್ಲದೆ ಅಧಿಕಾರಿಗಳು ಸಚಿವರ ಮಾತು ಕೇಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆಯಾಗುತ್ತೆ ಎಂದು ಜನ ನಂಬಿದ್ದರು. ಆದರೆ ಯಾವುದೇ ಬದಲಾವಣೆಯಾಗದಿರುವುದು ದುರದೃಷ್ಟಕರ ಎಂದಿದ್ದಾರೆ.
ಘಾಜಿಪುರ್ ಜಿಲ್ಲಾಧಿಕಾರಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಸಮಾಜವಾದಿ ಪಕ್ಷದ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದ ರಾಜಭರ್ ಅವರು, ಅವರನ್ನು ಈ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದರು. ಆದರೆ ಯೋಗಿ ಅವರನ್ನು ವರ್ಗಾವಣೆ ಮಾಡದಿರುವುದರಿಂದ ರಾಜಭರ್ ತೀವ್ರ ಅಸಮಾಧಾನಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


