ಭಾರತದ ಯಾವುದೇ ಭಾಗದ ಮೇಲೆ ದಾಳಿ ಮಾಡಬಲ್ಲೆವು: ಉಗ್ರ ಸೈಯ್ಯದ್ ಸಲಾಹುದ್ದೀನ್
ಭಾರತದ ಯಾವುದೇ ಭಾಗದ ಮೇಲೆ ಬೇಕಾದರೂ ದಾಳಿ ಮಾಡಬಲ್ಲೆವು ಎಂದು ಹಿಜ್ಬುಲ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ಪಾಕಿಸ್ತಾನದಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾನೆ...

Published On :
ನವದೆಹಲಿ: ಭಾರತದ ಯಾವುದೇ ಭಾಗದ ಮೇಲೆ ಬೇಕಾದರೂ ದಾಳಿ ಮಾಡಬಲ್ಲೆವು ಎಂದು ಹಿಜ್ಬುಲ್ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್ ಪಾಕಿಸ್ತಾನದಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾನೆ.
ಪಾಕಿಸ್ತಾನದ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಮುಖ್ಯಸ್ಥ ಸೈಯ್ಯದ್ ಸಲಾಹುದ್ದೀನ್, ಭಾರತದ ಮೇಲೆ ಯಾವಾಗ ಹಾಗೂ ಯಾವುದೇ ಭಾಗದ ಮೇಲೆ ಬೇಕಾದರೂ ನಾವು ದಾಳಿ ನಡೆಸಬಲ್ಲೆವು ಎಂದು ನೇರವಾಗಿ ಬೆದರಿಕೆ ಹಾಕಿದ್ದಾನೆ.
ನಾನು ಭಾರತದಲ್ಲಿ ನಾನು ಹಲವಾರು ಭಯೋತ್ಪಾದಕ ಕೃತ್ಯಗಳನ್ನು ನಡೆಸಿದ್ದೇನೆ. ನನ್ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒಬ್ಬ ಮೂರ್ಖ. ಭಾರತದಿಂದ ಕಾಶ್ಮೀರವನ್ನು ವಿಮೋಚನೆಗೊಳಿಸುವವರೆಗೂ ನಮ್ಮ ಹೋರಾಟ ಅಂತ್ಯಗೊಳ್ಳುವುದಿಲ್ಲ ಎಂದು ಹೇಳಿದ್ದಾನೆ.
ಕೆಲ ದಿನಗಳ ಹಿಂದಷ್ಟೇ ಅಮೆರಿಕ ಸಲಾಹುದ್ದೀನ್ ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಣೆ ಮಾಡಿತ್ತು. ಅಮೆರಿಕದ ಈ ಕ್ರಮವನ್ನು ಪಾಕಿಸ್ತಾನ ಸಂಪೂರ್ಣ ಅಸಮರ್ಥನೀಯ ಎಂದು ಹೇಳಿತ್ತು. ಅಲ್ಲದೆ, ಸ್ವಯಂ ಆಡಳಿತೆಯ ಕಾಶ್ಮೀರಿಗಳ ಹಕ್ಕನ್ನು ಬೆಂಬಲಿಸುವ ವ್ಯಕ್ತಿ ಸಲಾಹುದ್ದೀನ್ ಎಂದು ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನTerror Attackಉಗ್ರರ ದಾಳಿHizbul Mujahideenಹಿಜ್ಬುಲ್ ಮುಜಾಹಿದ್ದೀನ್Syed Salahuddinಸೈಯ್ಯದ್ ಸಲಾಹುದ್ದೀನ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


