ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ:  2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಪೊಲೀಸ್ ಹುತಾತ್ಮ
ಸಂಗ್ರಹ ಚಿತ್ರ
Published On :
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾ ಪಡೆ ಓರ್ವ ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ. 
ಪುಲ್ವಾಮ ಜಿಲ್ಲೆಯ ಬಮ್ನೂ ಎಂಬ ಪ್ರದೇಶದಲ್ಲಿ ಉಗ್ರರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಪುಲ್ವಾಮ ಜಿಲ್ಲೆ ವಿಶೇಷ ಕಾರ್ಯಾಚರಣಾ ಪಡೆ ಹಾಗೂ 44 ರಾಷ್ಟ್ರೀಯ ರೈಫಲ್ಸ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆಂದು ಹೇಳಲಾಗುತ್ತಿದೆ.
ಪ್ರಸ್ತುತ ಸ್ಥಳದಲ್ಲಿ ಮತ್ತಿಬ್ಬರು ಉಗ್ರರು ಅಡಗಿ ಕುಳಿತಿರುವುದಾಗಿ ಹೇಳಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. 
ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ
ದಕ್ಷಿಣ ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಪೊಲೀಸರ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಪೇದೆಗೆ ಗಂಭೀರವಾದ ಗಾಯವಾಗಿರುವುದಾಗಿ ತಿಳಿದುಬಂದಿದೆ. 

ಇಂದು ಬೆಳಿಗ್ಗೆ ಉಗ್ರರು ಪೊಲೀಸ್ ವಾಹನದ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ನಂತರ ಸ್ಥಳದಿಂದ ಕಾಲ್ಕಿತ್ತಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.