ಪ್ರಣಬ್ ನನಗೆ ತಂದೆಯಂತೆ ಮಾರ್ಗದರ್ಶನ ನೀಡಿದರು: ಭಾವುಕರಾದ ಪ್ರಧಾನಿ ಮೋದಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನನನಗೆ ತಂದೆಯಂತೆ ಮಾರ್ಗದರ್ಶ ನೀಡಿದರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ...

Published On :
ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ನನನಗೆ ತಂದೆಯಂತೆ ಮಾರ್ಗದರ್ಶ ನೀಡಿದರು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರೆಸಿಡೆಂಟ್ ಎ ಸ್ಟೇಟ್ಸ್'ಮನ್ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಡಳಿತಾವಧಿಯಲ್ಲಿ ಪ್ರಣಬ್ ದಾ ಅವರು ತಂದೆಯ ಸ್ಥಾನದಲ್ಲಿ ನಿಂತು ನನಗೆ ಮಾರ್ಗದರ್ಶನ ನೀಡಿದ್ದಾರೆ. ಮೋದಿ ಜೀ ನೀವು ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿಕೊಳ್ಳಿ ಎಂಬುದಾಗಿ ಹೇಳುತ್ತಿದ್ದರು ಎಂದು ಪ್ರಣಬ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಾನು ದೆಹಲಿಗೆ ಬಂದ ವೇಳೆ ನನಗೆ ಮಾರ್ಗದರ್ಶನ ಮಾಡಿದ ಪ್ರಣಬ್ ದಾರವರು ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ. ಅದನ್ನು ನಾನು ಎಂದಿಗೂ ಮರೆಯುವುದಿಲ್ಲ. ಪ್ರಣಬ್ ಅವರೊಂದಿಗೆ ಕಾರ್ಯ ನಿರ್ವಹಿಸುವ ಅವಕಾಶ ಸಿಕ್ಕಿದ್ದು, ನನಗೆ ದೊರೆತ ಮನ್ನಣೆಯಾಗಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪುಸ್ತಕ ಕುರಿತಂತೆ ಮಾತನಾಡಿರುವ ಅವರು ರಾಷ್ಟ್ರಪತಿ ಸ್ಥಾನ ಎಂಬುದು ರಾಜತಾಂತ್ರಿಕ ಗೌರವಕ್ಕಿಂತ ಹೆಚ್ಚು ಎಂದು ಪ್ರೆಸಿಡೆಂಟ್ ಎ ಸ್ಟೇಟ್ಸ್ ಮನ್ ಪುಸ್ತಕದ ಕುರಿತು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ನಂತರ ಪ್ರತಿಕ್ರಿಯೆ ನೀಡಿರುವ ಪ್ರಣಬ್ ಅವರು, 3 ವರ್ಷಗಳ ಪರಸ್ಪರ ಸಹಕಾರದಿಂದ ಕೆಲಸ ಮಾಡಿದ್ದೇವೆ. ನಮ್ಮಿಬ್ಬರ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಉತ್ತಮ ಸಂಬಂಧ ಕಾಪಾಡಿದ್ದೇವೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


