ಯುವಕರಿಗಾಗಿ ಪುಸ್ತಕ ಬರೆಯಲಿದ್ದಾರೆ ಪ್ರಧಾನಿ ಮೋದಿ, ಶೀಘ್ರದಲ್ಲೇ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ಅವರು ಯುವಕರಿಗಾಗಿ ಒಂದು ಪುಸ್ತಕ ಬರೆಯುತ್ತಿದ್ದು, ಅದರಲ್ಲಿ ಪ್ರಮುಖವಾಗಿ ಪರೀಕ್ಷೆಯ.....

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುವಕರಿಗಾಗಿ ಒಂದು ಪುಸ್ತಕ ಬರೆಯುತ್ತಿದ್ದು, ಅದರಲ್ಲಿ ಪ್ರಮುಖವಾಗಿ ಪರೀಕ್ಷೆಯ ಒತ್ತಡದಿಂದ ಹೊರ ಬರುವುದು ಹೇಗೆ ಮತ್ತು ಪರೀಕ್ಷೆ ಮೇಲೆ ಹಿಡಿತ ಸಾಧಿಸುವುದು ಹೇಗೆ ಹಾಗೂ ಪರೀಕ್ಷೆಯ ನಂತರ ಏನು ಮಾಡಬೇಕು ಎಂಬುದರ ಬಗ್ಗೆ ಸಲಹೆ ನೀಡಲಿದ್ದಾರೆ.
ಪೆಂಗ್ವಿನ್ ರಾಂಡಮ್ ಹೌಸ್(ಪಿಆರ್ ಎಚ್) ಈ ಪುಸ್ತಕವನ್ನು ಪ್ರಕಟಿಸುತ್ತಿದ್ದು, ಪುಸ್ತಕ ಬಹುಭಾಷೆಯಲ್ಲಿ ಪ್ರಕಟಗೊಳ್ಳುತ್ತಿದೆ. ಪುಸ್ತಕ ಇನ್ನು ಕೆಲವೇ ತಿಂಗಳಲ್ಲಿ ಎಲ್ಲಾ ಪುಸ್ತಕ ಮಳಿಗೆಯಲ್ಲೂ ದೊರೆಯಲಿದೆ ಎಂದು ಪ್ರಕಾಶಕರು ತಿಳಿಸಿದ್ದಾರೆ.
ಈ ಪುಸ್ತಕ ವಿಶೇಷವಾಗಿ 10ನೇ ತರಗತಿ ಮತ್ತು 12ನೇ ತರಗತಿಯ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಈ ಪುಸ್ತಕದ ಮೂಲಕ ವಿದ್ಯಾರ್ಥಿಗಳಿಗೆ ಒಬ್ಬ ಉತ್ತಮ ಸ್ನೇಹಿತರಾಗಿ ಅವರ ಪರೀಕ್ಷೆ ತಯಾರಿಗೆ ಪ್ರೋತ್ಸಾಹ ನೀಡಲಿದ್ದಾರೆ ಎಂದು ಪ್ರಕಾಶಕರು ಹೇಳಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಯುವಕರಿಗಾಗಿ ಪುಸ್ತಕ ಬರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


