ದೇಶ

ಸಿಎನ್ಎನ್ ಗೆ ಥಳಿಸುತ್ತಿರುವ ವಿಡಿಯೋ ಟ್ವೀಟ್ ಮಾಡಿದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಧ್ಯಮಗಳನ್ನು ಟೀಕಿಸುತ್ತಿರುವುದು ಇದೇ ಮೊದಲಲ್ಲ, ಆದರೆ ಈ ಬಾರಿ ವಿಚಿತ್ರವಾಗಿ ಮಾಧ್ಯಮಗಳ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಟ್ರಂಪ್ ಸಿಎನ್ಎನ್...

ಸಿಎನ್ಎನ್ ಗೆ ಥಳಿಸುತ್ತಿರುವ ವಿಡಿಯೋ ಟ್ವೀಟ್ ಮಾಡಿದ ಟ್ರಂಪ್
ಡೊನಾಲ್ಡ್ ಟ್ರಂಪ್
Published On :
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಧ್ಯಮಗಳನ್ನು ಟೀಕಿಸುತ್ತಿರುವುದು ಇದೇ ಮೊದಲಲ್ಲ, ಆದರೆ ಈ ಬಾರಿ ವಿಚಿತ್ರವಾಗಿ ಮಾಧ್ಯಮಗಳ ವಿರುದ್ಧ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವ ಟ್ರಂಪ್ ಸಿಎನ್ಎನ್ ಮಾಧ್ಯಮವನ್ನು ಹೊಡೆಯುತ್ತಿರುವಂತಹ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. 
ಈ ಹಿಂದೆ ರೆಸ್ಲೆಂಗ್ ನಲ್ಲಿ ತಮ್ಮ ವಿರೋಧಿಯನ್ನು ಥಳಿಸುತ್ತಿರುವ ವಿಡಿಯೋವನ್ನು ಬಳಕೆ ಮಾಡಿರುವ ಡೊನಾಲ್ಡ್ ಟ್ರಂಪ್, ಆ ವಿಡಿಯೋದಲ್ಲಿರುವ ಎದುರಾಳಿಯ ಮುಖಕ್ಕೆ ಸಿಎನ್ಎನ್ ಲೋಗೊ ಹಾಕಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
ಎಂಎಸ್ಎನ್ ಬಿಸಿ ಟಾಕ್ ಶೋ ಹೋಸ್ಟ್ ಗಳ ವಿರುದ್ಧ ಟ್ವಿಟರ್ ನಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ವಿರೋಧಕ್ಕೆ ರಾಜಕೀಯ ಮುಖಂಡರಿಂದಲೂ ಖಂಡನೆ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಸಿಎನ್ಎನ್ ಗೆ ಥಳಿಸುತ್ತಿರುವ ರೀತಿಯ ವಿಡಿಯೋವನ್ನು ಎಡಿಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.