ದೇಶ

ಶಾಂಪೂ ನೀಡಿದ್ದ ಸಿಎಂ ಯೋಗಿ ಆದಿತ್ಯನಾಥ್ ಗೆ ದಲಿತರಿಂದ 125 ಕೆಜಿ ಸೋಪು

ಮುಖ್ಯಮಂತ್ರಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಖುಷಿನಗರದ ದಲಿತ ಕುಟುಂಬಗಳಿಗೆ ಶಾಂಪೂ ವಿತರಿಸಿದ್ದನ್ನು ಖಂಡಿಸಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ...

ಶಾಂಪೂ ನೀಡಿದ್ದ ಸಿಎಂ ಯೋಗಿ ಆದಿತ್ಯನಾಥ್ ಗೆ ದಲಿತರಿಂದ 125 ಕೆಜಿ ಸೋಪು
ಯೋಗಿ ಆದಿತ್ಯನಾಥ್
Published On :
ಲಕ್ನೋ: ಮುಖ್ಯಮಂತ್ರಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಖುಷಿನಗರದ ದಲಿತ ಕುಟುಂಬಗಳಿಗೆ ಶಾಂಪೂ ವಿತರಿಸಿದ್ದನ್ನು ಖಂಡಿಸಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ 125 ಕೆಜಿ ಸಾಬೂನು ನೀಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರ ನಿವಾಸದತ್ತ ಪ್ರತಿಭಟನೆ ಹಮ್ಮಿಕೊಂಡಿದ್ದ ದಲಿತರನ್ನು ಪೊಲೀಸರು ಬಂಧಿಸಿದ್ದಾರೆ.ಮಾಜಿ ಐಪಿಎಸ್ ಅಧಿಕಾರಿ ಎಸ್ಆರ್ ದಾರಾಪುರಿ ಸೇರಿದಂತೆ ಎಂಟು ಕಾರ್ಯಕರ್ತರು ನಿಯಮ ಉಲ್ಲಂಘಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವುದಕ್ಕೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಐಪಿಸಿ ಸೆಕ್ಷನ್ 144ರ ನಿಯಮ ಉಲ್ಲಂಘಿಸಿ ಪ್ರತಿಭಟನೆ ಹಮ್ಮಿಕೊಳ್ಳುತ್ತಿರುವುದನ್ನು ಕೈ ಬಿಡಬೇಕು ಎಂದು ಪೊಲೀಸ್ ಅಧಿಕಾರಿ ವಿಕಾಸ್ ಚಂದ್ರ ಅವರು ವಿನಂತಿಸಿದರೂ ದಾರಾಪುರಿ ಒಪ್ಪಲಿಲ್ಲ. ಹಾಗಾಗಿ ದಾರಾಪುರಿ ಸೇರಿದಂತೆ  ಬುಂದೇಲ್‍ಖಂಡ ದಲಿತ ಸೇನೆಯ 23 ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ರ್ಯಾಲಿಯಲ್ಲಿ 45 ದಲಿತ ಕಾರ್ಯಕರ್ತರು 125 ಕೆಜಿ ತೂಕದ ಸೋಪಿನಲ್ಲಿ ಬುದ್ಧನ ಚಿತ್ರ ರಚಿಸಿ ಅದನ್ನು ಆದಿತ್ಯನಾಥ ಅವರಿಗೆ ಉಡುಗೊರೆ ನೀಡಲು ಹೊರಟಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.