ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ನಾಲ್ವರು ಕ್ಲಾಸ್ ಮೇಟ್ ಗಳಿಂದ ಅತ್ಯಾಚಾರ ಆರೋಪ
ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದ 17 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ...

Published On :
ಹೈದರಾಬಾದ್: ಸ್ನೇಹಿತನ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಬಂದ 17 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ.
ಆರೋಪಿಗಳು ಘಟನೆಯನ್ನು ಸಂಪೂರ್ಣವಾಗಿ ಚಿತ್ರೀಕರಿಸಿ, ಯಾರಿಗೂ ತಿಳಿಸಿದಂತೆ ಆಕೆಗೆ ಬೆದರಿಕೆ ಒಡ್ಡಿದ್ದಾರೆ.
ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ ಸ್ನೇಹಿತರೊಬ್ಬರ ಬರ್ತ್‌ಡೇ ಪಾರ್ಟಿಗೆ ಅವರ ಮನೆಗೆ ತೆರಳಿದ್ದಳು. ಈ ವೇಳೆ ಆಕೆಯ ನಾಲ್ಕು ಜನ ಕ್ಲಾಸ್‌ಮೆಂಟ್‌ಗಳೇ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಈ ಸಂಬಂಧ ವಿದ್ಯಾರ್ಥಿನಿ ಇಲ್ಲಿನ ಖಮ್ಮಂ III ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಅತ್ಯಾಚಾರವನ್ನು ಆರೋಪಿಗಳು ಚಿತ್ರೀಕರಿಸಿದ್ದಾರೆ ಹಾಗೂ ಈ ಕೃತ್ಯದ ಬಗ್ಗೆ ಎಲ್ಲೂ ಬಾಯ್ಬಿಡದಂತೆ ಬೆದರಿಕೆಯೊಡ್ಡಿದ್ದರು ಎಂದು ದೂರಿನಲ್ಲಿ ಸಂತ್ರಸ್ತೆ ವಿವರಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿನಿಯ ದೂರನ್ನು ಆಧರಿಸಿ ಪೊಲೀಸರು ಗ್ಯಾಂಗ್‌ರೇಪ್ ಹಾಗೂ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹೈದರಾಬಾದ್ಹುಟ್ಟುಹಬ್ಬGang Rapeಸಾಮೂಹಿಕ ಅತ್ಯಾಚಾರstudentವಿದ್ಯಾರ್ಥಿನಿClassmatesBirthday partyHyedarabadhಕ್ಲಾಸ್ ಮೇಟ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


