ಪಶ್ಚಿಮ ಬಂಗಾಳ ರಾಜ್ಯಪಾಲರು ಸಾಂವಿಧಾನಿಕ ಇತಿಮಿತಿಗಳನ್ನು ದಾಟಿದ್ದಾರೆ: ಟಿಎಂಸಿ
ಪಶ್ಚಿಮ ಬಂಗಾಳದ ರಾಜ್ಯಪಾಲ ಕೆಎನ್ ತ್ರಿಪಾಠಿ ಅವರ ವಿರುದ್ಧದ ವಾಗ್ದಾಳಿಯನ್ನು ತೃಣಮೂಲ ಕಾಂಗ್ರೆಸ್ ಬುಧವಾರವೂ.....

Published On :
ಕೋಲ್ಕತಾ: ಪಶ್ಚಿಮ ಬಂಗಾಳದ ರಾಜ್ಯಪಾಲ ಕೆಎನ್ ತ್ರಿಪಾಠಿ ಅವರ ವಿರುದ್ಧದ ವಾಗ್ದಾಳಿಯನ್ನು ತೃಣಮೂಲ ಕಾಂಗ್ರೆಸ್ ಬುಧವಾರವೂ ಮುಂದುವರೆಸಿದ್ದು, ರಾಜ್ಯಪಾಲರು ಎಲ್ಲಾ ರೀತಿಯ ಸಾಂವಿಧಾನಿಕ ಇತಿಮಿತಿಗಳನ್ನು ಮೀರಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದೆ. ಅಲ್ಲದೆ ರಾಜಭವನ ಯಾವುದೇ ಕಾರಣಕ್ಕೂ ಬಿಜೆಪಿ ಕಚೇರಿಯಾಗಬಾರದು ಎಂದು ಆಗ್ರಹಿಸಿದೆ.
ನಿನ್ನೆಯಷ್ಟೇ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ರಾಜ್ಯಪಾಲರು ತಮಗೆ ಬೆದರಿಕೆ ಹಾಕಿದ್ದಾರೆ ಮತ್ತು ಅವರು ಒಬ್ಬ ಬಿಜೆಪಿ ಬ್ಲಾಕ್ ಅಧ್ಯಕ್ಷರ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ನಿನ್ನೆ ಮುಖ್ಯಮಂತ್ರಿಗಳೊಂದಿಗೆ ರಾಜ್ಯಪಾಲರು ಮಾತನಾಡಿದ ರೀತಿ ಸರಿ ಇರಲಿಲ್ಲ. ಅವರು ಸಾಂವಿಧಾನಿಕ ಇತಿಮಿತಿಗಳನ್ನು ಮೀರಿ ಮಾತನಾಡುತ್ತಿದ್ದಾರೆ. ಅವರು ಇದು ಉತ್ತರ ಪ್ರದೇಶ ಅಲ್ಲ ಎಂಬುದನ್ನು ಮರೆತಿರಬೇಕು ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಅವರು ಹೇಳಿದ್ದಾರೆ.
ರಾಜ್ಯಪಾಲರ ಅಧಿಕೃತ ನಿವಾಸ ರಾಜಭವನ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷದ ಕಚೇರಿಯಾಗಬಾರದು ಎಂದು ಚಟರ್ಜಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


