ಆರು ತಿಂಗಳಲ್ಲಿ 92 ಭಯೋತ್ಪಾದಕರ ಹುಟ್ಟಡಗಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ತಿಂಗಳಲ್ಲಿ 92 ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ತಿಂಗಳಲ್ಲಿ 92 ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಮಟ್ಟ ಹಾಕಲು ಭಾರತೀಯ ಸೇನೆಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದು ಇದನ್ನು ಸಫಲವಾಗಿ ಬಳಸಿಕೊಂಡು ಭಾರತೀಯ ಸೇನೆ ಕಣಿವೆ ರಾಜ್ಯದಲ್ಲಿ 92 ಉಗ್ರರನ್ನು ಹೊಡೆದುರುಳಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಕಾಶ್ಮೀರ ಕಣಿವೆಯಲ್ಲಿ ಮೋಸ್ಟ್ ವಾಂಟೆಡ್ ಉಗ್ರರು ಸೇರಿದಂತೆ ಸುಮಾರು 92 ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ. ಇನ್ನು ಸೇನೆಯ ಬಲಗೊಳ್ಳುತ್ತಿದ್ದಂತೆ ಗಡಿಯಲ್ಲಿ ಉಗ್ರರು ಒಳನುಸುಳುವವರ ಸಂಖ್ಯೆಯು ಕಡಿಮೆಯಾಗಿದೆ.
ಇನ್ನು 2012 ಮತ್ತು 2013ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗಲೂ ಈ ಪ್ರಮಾಣದಲ್ಲಿ ಉಗ್ರರು ಯೋಧರ ಕಾರ್ಯಾಚರಣೆಯಲ್ಲಿ ಹತ್ಯೆಯಾಗಿರಲಿಲ್ಲ ಎಂದು ವರದಿ ವಿವರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


