ಲಾಲೂ ಮನೆ ಮೇಲಿನ ಸಿಬಿಐ ದಾಳಿ ಹಿಂದೆ ಕೇಂದ್ರದ ಕೈವಾಡವಿಲ್ಲ; ವೆಂಕಯ್ಯ ನಾಯ್ಡು
ಹೋಟೆಲ್ ಗುತ್ತಿಗೆ ಅಕ್ರಮ ಆರೋಪ ಪ್ರಕರಣ ಸಂಬಂಧ ಮಾಜಿ ರೈಲ್ವೇ ಸಚಿವ ಲಾಲೂ ಪ್ರಸಾದ್ ಯಾದವ್ ಅವರ ನಿವಾಸದ ಮೇಲಿನ ಸಿಬಿಐ ದಾಳಿ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಶುಕ್ರವಾರ...

Published On :
ನವದೆಹಲಿ: ಹೋಟೆಲ್ ಗುತ್ತಿಗೆ ಅಕ್ರಮ ಆರೋಪ ಪ್ರಕರಣ ಸಂಬಂಧ ಮಾಜಿ ರೈಲ್ವೇ ಸಚಿವ ಲಾಲೂ ಪ್ರಸಾದ್ ಯಾದವ್ ಅವರ ನಿವಾಸದ ಮೇಲಿನ ಸಿಬಿಐ ದಾಳಿ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿಲ್ಲ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಲಾಲೂ ಪ್ರಸಾದ್ ಅವರ ಮನೆ ಮೇಲಿನ ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದಾಳಿ ಹಿಂದೆ ಸರ್ಕಾರದ ಕೈವಾಡವಿಲ್ಲ ಎಂಬುದನ್ನು ಈ ಮೂಲಕ ನಾನು ಸ್ಪಷ್ಟ ಪಡಿಸುತ್ತೇನೆ. ಆರೋಪ ಪ್ರಕರಣವನ್ನು ಎದುರಿಸುವ ಬದಲು, ಆರೋಪಗಳಿಗೆ ಉತ್ತರ ನೀಡಿುವ ಬದಲು ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುವುದು ಇತ್ತೀಚಿನ ದಿನಗಳಲ್ಲಿ ಕೆಲ ವಿರೋಧ ಪಕ್ಷಗಳಿಗೆ ಫ್ಯಾಷನ್ ಆಗಿ ಹೋಗಿದೆ ಎಂದು ಹೇಳಿದ್ದಾರೆ.
ತಮ್ಮ ತಪ್ಪುಗಳನ್ನು ಮರೆಮಾಚುವ ಸಲುವಾಗಿ ವಿರೋಧ ಪಕ್ಷಗಳು ಮಾಡುವ ತಪ್ಪು ಆರೋಪಗಳು ಜನರಿಗೆ ಅರ್ಥವಾಗುತ್ತದೆ ಎಂದು ನಾವು ನಂಬಿದ್ದೇವೆ. ಪ್ರಸ್ತುತ ಲಾಲೂ ಪ್ರಸಾದ್ ಯಾದವ್ ವಿರುದ್ಧ ದಾಖಲಾಗಿರುವ ಪ್ರಕರಣ ಸರ್ಕಾರ ದಾಖಲಿಸಿರುವುದಲ್ಲ. ಈ ಹಿಂದೆಯೇ ಇದ್ದ ಪ್ರಕರಣವಾಗಿದೆ. ಪ್ರಕರಣ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಲಾಲೂ ಪ್ರಸಾದ್ ಯಾದವ್Lalu Prasad YadavCBIಸಿಬಿಐವೆಂಕಯ್ಯ ನಾಯ್ಡುVenkaiah NaiduHotel tender irregularitiesಹೋಟೆಲ್ ಗುತ್ತಿಗೆ ಅಕ್ರಮ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


