ದೇಶ

ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ: ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತ

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ...

ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ: ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸಂಪೂರ್ಣ ಸ್ಥಗಿತ
ಸಂಗ್ರಹ ಚಿತ್ರ
Published On :
ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸಿದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. 
ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಅವಲೋಕನ ನಡೆಸಿದ್ದರು. 
ಉನ್ನತಮಟ್ಟದ ಸಭೆ ನಡೆಸಿದ್ದ ಅವರು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಭದ್ರತೆ ಕುರಿತಂತೆ ಸೂಚನೆಗಳನ್ನು ನೀಡಿದ್ದರು. ಇದರಂತೆ ವದಂತಿಗಳು ಹರಡುವುದನ್ನು ತಡೆಯುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಇಂದು ರಾತ್ರಿ 10ಗಂಟೆಯವರೆಗೂ ಮೊಬೈಲ್, ಬ್ರಾಡ್ ಬ್ಯಾಂಡ್ ಸೇರಿದಂತೆ ಎಲ್ಲಾ ರೀತಿಂದ ಅಂತರ್ಜಾಲ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. 
ಅನಂತ್ ನಾಗ್ ಜಿಲ್ಲೆಯಲ್ಲಿ 2016ರ ಜುಲೈ 8ರಂದು ನಡೆಸಲಾಗಿದ್ದ ಎನ್ ಕೌಂಟರ್ ನಲ್ಲಿ ಉಗ್ರ ಬುರ್ಹಾನ್ ವಾನಿಯನ್ನು ಹೊಡೆದುರುಳಿಸಲಾಗಿತ್ತು. ಬುರ್ಹಾನ್ ವಾನಿ ಹತ್ಯೆ ಬಳಿಕ ಕಾಶ್ಮೀರದಲ್ಲಿ ಹಿಂಸಾಚಾರ ಉಲ್ಬಣಗೊಂಡಿತ್ತು. ನಿಂತರ ಹಿಂಸಾಚಾರ, ಕಲ್ಲು ತೂರಾಟ, ಗೋಲಿಬಾರ್ ನಿಂದಾಗಿ ಕಾಶ್ಮೀರ ತತ್ತರಿಸಿ ಹೋಗಿತ್ತು. 53 ದಿನಗಳ ಬಳಿತ ಕಾಶ್ಮೀರದಲ್ಲಿ ಹೇರಲಾಗಿದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿತ್ತು. ಇದರಂತೆ ನಾಳೆ ಬುರ್ಹಾನ್ ವಾನಿ ಸಾವಿನ ವಾರ್ಷಿಕ ದಿನಾಚರಣೆಯನ್ನು ನಡೆಸಲು ಕಾಶ್ಮೀರದಲ್ಲಿ ಸಿದ್ಧತೆಗಳು ನಡೆದಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.