ದೇಶ

ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ: ಅಮರನಾಥ ಯಾತ್ರೆ ಸ್ಥಗಿತ

ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ವನಿಯ ಹತ್ಯೆಯಾಗಿ ಒಂದು ವರ್ಷವಾಗಿದ್ದು, ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.

ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ: ಅಮರನಾಥ ಯಾತ್ರೆ ಸ್ಥಗಿತ
ಅಮರನಾಥ ಯಾತ್ರೆ
Published On :
ಜಮ್ಮು: ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಉಗ್ರ ಬುರ್ಹಾನ್ ವನಿಯ ಹತ್ಯೆಯಾಗಿ ಒಂದು ವರ್ಷವಾಗಿದ್ದು, ಕಾಶ್ಮೀರದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. 
ತ್ರಾಲ್ ಸೇರಿದಂತೆ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, ನಿರ್ಬಂಧ ಹೇರಲಾಗಿದೆ. ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.  
ಕಾನೂನು ಸುವ್ಯವಸ್ಥೆ ಕಾರಣದಿಂದಾಗಿ ಭಗವತಿ ನಗರ ಬೇಸ್ ಕ್ಯಾಂಪ್ ನಿಂದ ಯತರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈ ವರೆಗೂ 1,15,841 ಯಾತ್ರಾರ್ಥಿಗಳು ಅಮರನಾಥ ಗುಹೆಯ ದರ್ಶನ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.