ಗಡಿ ಉದ್ವಿಗ್ನ: ಭಾರತ ಪ್ರವಾಸ ಮುಂದೂಡುವಂತೆ ತನ್ನ ಪ್ರಜೆಗಳಿಗೆ ಚೀನಾ ಸಲಹೆ!
ಸಿಕ್ಕಿಂನ ಡೋಕ್ಲಾಮ್ ಪ್ರದೇಶದ ಮೇಲಿನ ಹಿಡಿತದ ವಿಚಾರಕ್ಕೆ ಸಂಬಂಧಿಸಿದಂತೆ ಇಂಡೋ-ಚೀನಾ ತಿಕ್ಕಾಟ ಮುಂದುವರೆದಿರುವಂತೆಯೇ ಅತ್ತ ಚೀನಾ ಸರ್ಕಾರ ತನ್ನ ದೇಶದ ಪ್ರಜೆಗಳು ಭಾರತ ಪ್ರವಾಸವನ್ನು ಮುಂದೂಡುವಂತೆ ಸಲಹೆ ನೀಡಿದೆ.

ನವದೆಹಲಿ: ಸಿಕ್ಕಿಂನ ಡೋಕ್ಲಾಮ್ ಪ್ರದೇಶದ ಮೇಲಿನ ಹಿಡಿತದ ವಿಚಾರಕ್ಕೆ ಸಂಬಂಧಿಸಿದಂತೆ ಇಂಡೋ-ಚೀನಾ ತಿಕ್ಕಾಟ ಮುಂದುವರೆದಿರುವಂತೆಯೇ ಅತ್ತ ಚೀನಾ ಸರ್ಕಾರ ತನ್ನ ದೇಶದ ಪ್ರಜೆಗಳು ಭಾರತ ಪ್ರವಾಸವನ್ನು ಮುಂದೂಡುವಂತೆ ಸಲಹೆ ನೀಡಿದೆ.
ಶನಿವಾರ ತನ್ನ ಪ್ರಜೆಗಳಿಗೆ ಮುಂಜಾಗ್ರತಾ ಸಲಹೆಗಳನ್ನು ನೀಡಿರುವ ಚೀನಾ ಸರ್ಕಾರ ಚೀನಾ ಪ್ರಜೆಗಳು ಭಾರತ ಪ್ರವಾಸವನ್ನು ಕೆಲ ದಿನಗಳ ಮಟ್ಟಿಗೆ ಮುಂದೂಡಬೇಕು ಮತ್ತು ಭಾರತದಲ್ಲಿ ತಮ್ಮ ಸಂಬಂಧಿಕರ ಸುರಕ್ಷತೆ ಕುರಿತಂತೆ ಜಾಗೃತಿ ವಹಿಸಬೇಕು ಎಂದು ಹೇಳಿದೆ. ಪ್ರಸ್ತುತ ಭಾರತದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಗಡಿ ಉದ್ವಿಗ್ನವಾಗಿರುವುದರಿಂದ ಚೀನಾ ಸರ್ಕಾರ ಈ ಮುಂಜಾಗ್ರತಾ ಕ್ರಮಗಳನ್ನು ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ.
ಇದೇ ವೇಳೆ ದೆಹಲಿಯಲ್ಲಿರುವ ಚೀನಾ ರಾಯಭಾರ ಕಚೇರಿ ಕೂಡ ದೇಶದಲ್ಲಿರುವ ತನ್ನ ನಾಗರಿಕರಿಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದ್ದು, ತಮ್ಮ ಮತ್ತು ಕುಟುಂಬಸ್ಥರು, ಸ್ನೇಹಿತರ ಸುರಕ್ಷತೆ ಕುರಿತಂತೆ ಕ್ಷಣ ಕ್ಷಣದ ಮಾಹಿತಿ ಪಡೆಯುವಂತೆ ಸಲಹೆ ನೀಡಿದೆ. ಅಂತೆಯೇ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಯೋಜಿಸಿಕೊಳ್ಳುವಂತೆ ಸಲಹೆ ನೀಡಿದೆ.
ಇನ್ನು ಪ್ರತೀ ವರ್ಷ ಭಾರತಕ್ಕೆ ಭೇಟಿ ನೀಡುವ ಚೀನಾ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಪ್ರತೀ ವರ್ಷ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಚೀನಾ ಪ್ರವಾಸಿಗರು ಭಾರತಕ್ಕೆ ಭೇಟಿ ನೀಡುತ್ತಿರುತ್ತಾರೆ. 2003ರಲ್ಲಿ 21,152 ರಷ್ಟಿದ್ದ ಚೀನಾ ಪ್ರವಾಸಿಗರ ಸಂಖ್ಯೆ 2017ರ ಹೊತ್ತಿಗೆ ಸುಮಾರು 2 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಬೀಜಿಂಗ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


