ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಡಿ: ಮಮತಾ ಬ್ಯಾನರ್ಜಿಗೆ ಸ್ವಾಮಿ ಸಲಹೆ
ಪಶ್ಚಿಮ ಬಂಗಾಳದಲ್ಲಿ ನಿರ್ಮಾಣವಾಗಿರುವ ಉದ್ನಿಗ್ನ ವಾತಾವರಣ ಕುರಿತಂತೆ ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಬಿಜೆಪಿ...

Published On :
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಿರ್ಮಾಣವಾಗಿರುವ ಉದ್ನಿಗ್ನ ವಾತಾವರಣ ಕುರಿತಂತೆ ಕೇಂದ್ರ ಸರ್ಕಾರವನ್ನು ದೂಷಿಸುವ ಬದಲು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಡಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಭಾನುವಾರ ಸಲಹೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸಲು ಮಮತಾ ಬ್ಯಾನರ್ಜಿಯವರಿಗೆ ಸಾಧ್ಯವಾಗದಿದ್ದರೆ, ಕೇಂದ್ರದ ವಿರುದ್ಧ ಆರೋಪ ಮಾಡುವ ಬದಲು ರಾಷ್ಟ್ರಪತಿ ಆಡಳಿತ ಹೇರಿಕೆ ಮಾಡಲು ಬಿಡಲಿ ಎಂ0ದು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿಂದು ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಮಮತಾ ಬ್ಯಾನರ್ಜಿಯವರು ಹೇಳುತ್ತಿದ್ದಾರೆ, ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂಬುದೇ ಆದರೆ, ಕೇಂದ್ರದಿಂದ ಮತ್ತೇನನ್ನು ಕೇಳುತ್ತಿದ್ದಾರೆ? ರಾಜ್ಯದಲ್ಲಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಡಲಿ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮರು ಸ್ಥಾಪನೆಗೊಳ್ಳಲಿ. ರಾಜ್ಯದಲ್ಲಿ ನಿರ್ಮಾಣವಾಗಿರುವ ಪರಿಸ್ಥಿತಿಗೆ ಕೇಂದ್ರವನ್ನು ದೂಷಿಸುವುದು ಅವರ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


