ಕದನ ವಿರಾಮ ಉಲ್ಲಂಘನೆಗೆ ನಾಗರಿಕ ಬಲಿ: ಪಾಕ್ ವಿರುದ್ಧ ಭಾರತ ತೀವ್ರ ಆಕ್ರೋಶ
ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನಯ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ, ಪಾಕಿಸ್ತಾನದ ಈ ವರ್ತನೆಗೆ ಭಾರತ ಭಾನುವಾರ ತೀವ್ರ ಆಕ್ರೋಶ...

Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನ ಸೇನೆ ಪದೇ ಪದೇ ಕದನ ವಿರಾಮವನ್ನು ಉಲ್ಲಂಘನೆ ಮಾಡುತ್ತಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಈ ವರ್ತನೆಗೆ ಭಾರತ ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಪೂಂಚ್ ಮತ್ತು ಕೃಷ್ಣಘಾಟಿ ಸೆಕ್ಟರ್ ಗಳ ಬಳಿ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಗುಂಡಿನ ದಾಳಿ ದಾಳಿ ನಡೆಸಿದ್ದು, ಪರಿಣಾಮ ಇಬ್ಬರು ನಾಗರಿಕರು ಬಲಿಯಾಗಿದ್ದಾರೆ.
ಈ ಹಿನ್ನಲೆಯಲ್ಲಿ ಪಾಕಿಸ್ತಾನ ಈ ವರ್ತನೆ ಖಂಡನೆ ವ್ಯಕ್ತಪಡಿಸಿರುವ ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಕಚೇರಿ, ನಾಗರಿಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ದಾಳಿ ನಡೆಸುತ್ತಿದೆ. ಗಡಿಯಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ಪಾಕಿಸ್ತಾನ ಸೇನೆ ಈವರೆಗೂ 223 ಕದನ ವಿರಾಮ ಉಲ್ಲಂಘನೆ ಮಾಡಿದೆ. ಪಾಕಿಸ್ತಾನ ಗಡಿಯಿಂದ ಉಗ್ರರು 50 ಬಾರಿ ಗಡಿ ದಾಟಲು ಯತ್ನಿಸಿದ್ದಾರೆಂದು ಹೇಳಿದೆ.
ಕೆಲ ದಿನಗಳ ಹಿಂದಷ್ಟೇ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಓರ್ವ ಯೋಧ ಹಾಗೂ ಅವರ ಪತ್ನಿ ಸಾವನ್ನಪ್ಪಿದ್ದರು, ಅಲ್ಲದೆ, ಮೂವರು ಪುತ್ರಿಯರಿಗೆ ಗಾಯವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


