ದೇಶ

ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗುವ ಅಂಚಿನಲ್ಲಿದೆ: ಬಿಜೆಪಿ

ಪಶ್ಚಿಮ ಬಂಗಾಳದ ಒಂದು ಭಾಗದಲ್ಲಿ ನಡೆಯುತ್ತಿರುವ ತೀವ್ರವಾದ ಹಿಂಸೆ ಬಗ್ಗೆ ಪ್ರತಿಕ್ರಿಯಿಸಿರುವ...

ಪಶ್ಚಿಮ ಬಂಗಾಳ ಮತ್ತೊಂದು ಕಾಶ್ಮೀರವಾಗುವ ಅಂಚಿನಲ್ಲಿದೆ: ಬಿಜೆಪಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Published On :
ನವದೆಹಲಿ: ಪಶ್ಚಿಮ ಬಂಗಾಳದ ಒಂದು ಭಾಗದಲ್ಲಿ ನಡೆಯುತ್ತಿರುವ ತೀವ್ರವಾದ ಹಿಂಸೆ  ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತ ಹೊಂದಿರುವ ರಾಜ್ಯ ಮತ್ತೊಂದು ಕಾಶ್ಮೀರವಾಗುವ ಹಂತದಲ್ಲಿದೆ ಎಂದು ಹೇಳಿದೆ.
ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ಪ್ರತಿಕ್ರಿಯೆ ನೀಡಿ, ಪಶ್ಚಿಮ ಬಂಗಾಳದ ಜನತೆ ಸುರಕ್ಷಿತವಾಗಿ ಜೀವನ ನಡೆಸುತ್ತಿಲ್ಲ ಎಂದು ಹೇಳಿದ್ದಾರೆ.
ಮತ್ತೊಂದು ಕಾಶ್ಮೀರವಾಗುವ ಹಂತದಲ್ಲಿ ಪಶ್ಚಿಮ ಬಂಗಾಳವಿದೆ. ಇಲ್ಲಿ ಅನೇಕ ಮಂದಿ ಸಾಯುತ್ತಿದ್ದಾರೆ. ಜನತೆ ಸುರಕ್ಷಿತವಾಗಿಲ್ಲ. ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ.ಬಾಂಗ್ಲಾದೇಶಿಯರು ಭಾರತದೊಳಕ್ಕೆ ಪ್ರವೇಶಿಸಿ ಶಾಂತವಾಗಿ ಜೀವನ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಇದೇ ಅಭಿಪ್ರಾಯ ಹೇಳಿದ ಬಿಜೆಪಿಯ ಮತ್ತೊಬ್ಬ ನಾಯಕ ಸತ್ಯಪಾಲ್ ಸಿಂಗ್, ಕೋಮು ಗಲಭೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಉತ್ತೇಜಿಸುತ್ತಿದ್ದಾರೆ.ಅವರ ನೇತೃತ್ವದ ಸರ್ಕಾರದ ತಪ್ಪು ನೀತಿಗಳಿಂದಾಗಿ  ಪರಿಸ್ಥಿತಿ ಹದಗೆಡುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ. ಪೊಲೀಸರು ತಮ್ಮ ಗುರುತನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿ ಸಹಜ ಸ್ಥಿತಿಗೆ ಬಾರದಿದ್ದರೆ ದೇಶಕ್ಕೆ ಒಳ್ಳೆಯದಲ್ಲ. ಬಸಿರ್ಹಾಟ್ ಗೆ ನಮ್ಮನ್ನು ಹೋಗಲು ಬಿಟ್ಟಿಲ್ಲ. ಇದರರ್ಥ ಮಮತಾ ಬ್ಯಾನರ್ಜಿಯವರು ವಾಸ್ತವ ಸತ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಅವರು ಕೋಮು ಗುಂಪನ್ನು ಪ್ರಚೋದಿಸುತ್ತಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.