ಉತ್ತರ ಪ್ರದೇಶ: ಅನ್ಯ ಧರ್ಮೀಯನೊಂದಿಗೆ ಚಕ್ಕಂದ; ಮಗಳು, ಪ್ರಿಯಕರನನ್ನು ಕೊಂದ ತಂದೆ
ಅನ್ಯ ಧರ್ಮಿಯನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಮಗಳು ಮತ್ತು ಆತನ ಪ್ರಿಯಕರನನ್ನು ತಂದೆಯೆ ಮರ್ಯಾದಾ ಹತ್ಯೆ ಮಾಡಿರುವ ಅಮಾನುಷ ಘಟನೆ...

Published On :
ಸಂಭಾಲ್(ಉತ್ತರಪ್ರದೇಶ): ಅನ್ಯ ಧರ್ಮೀಯನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಮಗಳು ಮತ್ತು ಆತನ ಪ್ರಿಯಕರನನ್ನು ತಂದೆಯೆ ಮರ್ಯಾದಾ ಹತ್ಯೆ ಮಾಡಿರುವ ಅಮಾನುಷ ಘಟನೆ ಗಿನ್ನೋರ್ ಪ್ರದೇಶದಲ್ಲಿ ನಡೆದಿದೆ.
ನಿನ್ನೆ ಸಂಜೆ ಮನೆಗೆ ಬಂದ ತಂದೆ ಅಚ್ಚನ್ ಕುರೇಶಿಗೆ ಮಗಳು ಮನೆಯಲ್ಲಿ ಇಲ್ಲದಿರುವುದನ್ನು ಕಂಡು ಹೆದರಿಯಾಗಿದೆ. ನಂತರ ಆಕೆಯನ್ನು ಹುಡುಕುವಾಗ ಆಕೆ ಪ್ರಿಯಕರ 18 ವರ್ಷದ ಸಲ್ಮಾನ್ ಮನೆಯಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವುದು ಕಂಡಿದ್ದಾರೆ. ಇದರಿಂದ ಕೋಪಗೊಂಡ ಅಚ್ಚನ್ ಅವರು ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಪ್ರಿಯಕರ ಸಲ್ಮಾನ್ ನನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗಿನ್ನೋರ್ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್ ಛಾವಿ ಅವರು ಕೊಲೆ ಆರೋಪಿ ಅಚ್ಚನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ತನಿಖೆ ನಡೆಸುತ್ತಿದೆ. ಇನ್ನು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


