ದೇಶ

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಗೆ ಗೈರಾಗಲಿರುವ ನಿತೀಶ್ ಕುಮಾರ್

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿರುವ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಉಪರಾಷ್ಟ್ರಪತಿ ಚುನಾವಣೆಯಲ್ಲಿಯೂ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಿದೆ.

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವಿಪಕ್ಷಗಳ ಸಭೆಗೆ ಗೈರಾಗಲಿರುವ ನಿತೀಶ್ ಕುಮಾರ್
ನಿತೀಶ್ ಕುಮಾರ್
Published On :
ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡಿರುವ ಜೆಡಿಯು ರಾಷ್ಟ್ರಾಧ್ಯಕ್ಷ, ಬಿಹಾರ ಸಿಎಂ ನಿತೀಶ್ ಕುಮಾರ್ ಉಪರಾಷ್ಟ್ರಪತಿ ಚುನಾವಣೆಯಲ್ಲಿಯೂ ಎನ್ ಡಿಎ ಅಭ್ಯರ್ಥಿಗೆ ಬೆಂಬಲ ನೀಡುವ ಸಾಧ್ಯತೆಗಳು ಹೆಚ್ಚಿದೆ.
ಇದಕ್ಕೆ ಪೂರಕವೆಂಬಂತೆ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ನಡೆಸುತ್ತಿರುವ ಸಭೆಗೆ ನಿತೀಶ್ ಕುಮಾರ್ ಗೈರು ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ವರದಿಗಳ ಪ್ರಕಾರ ನಿತೀಶ್ ಕುಮಾರ್ ವೈರಾಣು ಸೋಂಕಿನಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಯುಪಿಎ ಸಭೆ ನಡೆಸಿದ್ದಾಗಲೂ ನಿತೀಶ್ ಕುಮಾರ್ ಇದೇ ಮಾದರಿಯಲ್ಲಿ ಗೈರು ಹಾಜರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.