ಕುಲಭೂಷಣ್ ಜಾಧವ್ ತಾಯಿಗೆ ವೀಸಾ ಮನವಿ ಪುರಸ್ಕರಿಸದ ಪಾಕ್ ವಿರುದ್ಧ ಸುಷ್ಮಾ ಸ್ವರಾಜ್ ವಾಗ್ದಾಳಿ
ಕುಲಭೂಷಣ್ ಜಾಧವ್ ತಾಯಿಗೆ ಪಾಕಿಸ್ತಾನ ವೀಸಾ ನೀಡುವಂತೆ ತಾವೇ ಖುದ್ದಾಗಿ ಪತ್ರ ಬರೆದಿದ್ದರೂ ಕೂಡ...

Published On :
ನವದೆಹಲಿ: ಕುಲಭೂಷಣ್ ಜಾಧವ್ ತಾಯಿಗೆ ಪಾಕಿಸ್ತಾನ ವೀಸಾ ನೀಡುವಂತೆ ತಾವೇ ಖುದ್ದಾಗಿ ಪತ್ರ ಬರೆದಿದ್ದರೂ ಕೂಡ ಸಕಾರಾತ್ಮಕವಾಗಿ ಸ್ಪಂದಿಸದ ಪಾಕಿಸ್ತಾನ ವಿದೇಶಾಂಗ ಸಚಿವ ಸರ್ತಾಜ್ ಅಜೀಜ್ ವಿರುದ್ಧ ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್ ವಾಗ್ದಾಳಿ ನಡೆಸಿದ್ದಾರೆ.
ಆದರೆ ಅಜೀಜ್ ಅವರ ಶಿಫಾರಸ್ಸಿನ ಮೇರೆಗೆ ಯಾವುದೇ ಪಾಕಿಸ್ತಾನಿ ಪ್ರಜೆ ವೈದ್ಯಕೀಯ ವೀಸಾ ನೀಡುವಂತೆ ಕೋರಿ ಮನವಿ ಸಲ್ಲಿಸಿದರೆ ಅವರಿಗೆ ಸಹಾಯ ಮಾಡುವುದಾಗಿ ಸುಷ್ಮಾ ಸ್ವರಾಜ್ ಭರವಸೆ ನೀಡಿದ್ದಾರೆ.
ಸರಣಿ ಟ್ವೀಟ್ ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಅವರು, ಭಾರತದಲ್ಲಿ ಚಿಕಿತ್ಸೆ ಪಡೆಯಲು ವೈದ್ಯಕೀಯ ವೀಸಾಕ್ಕೆ ಅರ್ಜಿ ಸಲ್ಲಿಸುವವರ ಮೇಲೆ ನನಗೆ ಕರುಣೆಯಿದೆ. ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ಕೊಡಬೇಕೆಂದರೆ ಅದಕ್ಕೆ ಸರ್ತಾಜ್ ಅಜೀಜ್ ಅವರ ಶಿಫಾರಸು ಬೇಕು ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿರುವ ತನ್ನ ಪುತ್ರನನ್ನು ಭೇಟಿ ಮಾಡಲು ವೀಸಾ ಅರ್ಜಿ ಸಲ್ಲಿಸಿರುವ ಆವಂತಿಕ ಜಾಧವ್ ಅವರ ಅರ್ಜಿ ವಿಲೇವಾರಿ ಬಾಕಿಯಿದೆ. ಅವರಿಗೆ ವೀಸಾ ಕೊಡಿಸುವಂತೆ ನಾನು ಖುದ್ದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಸರ್ತಾಜ್ ಅಜೀಜ್ ಅವರಿಗೆ ಪತ್ರ ಬರೆದಿದ್ದೇನೆ.ಆದರೆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ನೀಡುವ ಸೌಜನ್ಯವನ್ನು ಕೂಡ ಸರ್ತಾಜ್ ಅಜೀಜ್ ಮಾಡಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಬಲೋಚಿಸ್ತಾನ ಪ್ರಾಂತ್ಯದಲ್ಲಿ 46 ವರ್ಷದ ಕುಲಭೂಷಣ್ ಜಾಧವ್ ನನ್ನು ಬಂಧಿಸಲಾಗಿತ್ತು. ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆಪಾದನೆ ಮೇಲೆ ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ಮಿಲಿಟರಿ ಕೋರ್ಟ್ ಮರಣದಂಡನೆ ಶಿಕ್ಷೆ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನVisaSushma Swarajಸುಷ್ಮಾ ಸ್ವರಾಜ್Sartaj Azizವೀಸಾಸರ್ತಾಜ್ ಅಜೀಜ್Kulbhushan Jadhavಕುಲಭೂಷಣ್ ಜಾಧವ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


