ದೇಶ

ದಾಳಿ ಕುರಿತು ಗುಪ್ತಚರ ಮಾಹಿತಿಯಿದ್ದರೂ ಭದ್ರತೆಯನ್ನೇಕೆ ಒದಗಿಸಲಿಲ್ಲ?: ಕೇಂದ್ರಕ್ಕೆ ಕಾಂಗ್ರೆಸ್

ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರು ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದರೂ ಸೂಕ್ತ ರೀತಿಯ ಭದ್ರತಾ ಕ್ರಮಗಳನ್ನೇಕೆ ಕೈಗೊಳ್ಳಲಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಮಂಗಳವಾರ ಪ್ರಶ್ನೆ ಮಾಡಿದೆ...

ದಾಳಿ ಕುರಿತು ಗುಪ್ತಚರ ಮಾಹಿತಿಯಿದ್ದರೂ ಭದ್ರತೆಯನ್ನೇಕೆ ಒದಗಿಸಲಿಲ್ಲ?: ಕೇಂದ್ರಕ್ಕೆ ಕಾಂಗ್ರೆಸ್
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Published On :
ನವದೆಹಲಿ: ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರು ದಾಳಿ ನಡೆಸಲು ಯೋಜನೆ ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದರೂ ಸೂಕ್ತ ರೀತಿಯ ಭದ್ರತಾ ಕ್ರಮಗಳನ್ನೇಕೆ ಕೈಗೊಳ್ಳಲಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಮಂಗಳವಾರ ಪ್ರಶ್ನೆ ಮಾಡಿದೆ. 
ದಾಳಿ ಕುರಿತಂತೆ ಕೇಂದ್ರ ವಿರುದ್ಧದ ಕಿಡಿಕಾರಿರುವ ಕಾಂಗ್ರೆಸ್ ಪಕ್ಷದ ವಕ್ತಾರ ಆರ್.ಎಸ್. ಸುರ್ಜೇವಾಲಾ, ಜೂನ್. 25 ರಂದೇ ಗುಪ್ತಚರ ಇಲಾಖೆ ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರು ದಾಳಿ ನಡೆಸಲಿದ್ದಾರೆಂದು ಎಚ್ಚರಿಕೆ ನೀಡಿತ್ತು. ಆದರೂ ಕೇಂದ್ರ ಸರ್ಕಾರ ಸೂಕ್ತ ರೀತಿಯ ಭದ್ರತಾ ಕ್ರಮಗಳನ್ನೇಕೆ ಕೈಗೊಳ್ಳಲಿಲ್ಲ. ಇದು ಕೇಂದ್ರ ಸರ್ಕಾರ ಹಾಗೂ ಭದ್ರತಾ ಪಡೆಗಳ ವೈಫಲ್ಯ ಹಾಗೂ ಗಂಭೀರವಾದ ವಿಚಾರವಾಗಿದೆ ಎಂದು ಹೇಳಿದ್ದಾರೆ.
ದಾಳಿ ಕುರಿತು ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ನಲ್ಲಿ ಕೇಂದ್ರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದು, 2016 ನ.8 ರಿಂದಲೂ ಪಿಡಿಪಿ-ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉಗ್ರರ ದಾಳಿ ಪ್ರಕರಣಗಳು ಹೆಚ್ಚಾಗತೊಡಗಿವೆ. ಇದಕ್ಕೆ ಸರ್ಕಾರ ಸಾಕಷ್ಟು ಉತ್ತರಗಳನ್ನು ಕೊಡಬೇಕಿದೆ ಎಂದು ಹೇಳಿಕೊಂಡಿದೆ.
ಉಗ್ರರ ದಾಳಿಕೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ತೀವ್ರ ಖಂಡನೆ ವ್ಯಕ್ತಪಡಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಇದೊಂದು ಅಮಾನವೀಯ ಘಟನೆ ಮತ್ತು ಮಾನವೀಯತೆಯ ವಿರುದ್ಧದ ಘೋರ ಅಪರಾಧ. ದಾಳಿಯೊಂದು ಭದ್ರತಾ ವೈಫಲ್ಯವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದರ ಹೊಣೆ ಹೊತ್ತು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.