ದೇಶ

ಕೇರಳ: ಬಿಜೆಪಿ ಕಚೇರಿಗೆ ಬೆಂಕಿ

ಬಿಜೆಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಸಿಪಿಐ(ಎಂ) ಕಾರ್ಯಕರ್ತರ ಮೇಲೆ ನಾಡ ಬಾಂಬ್ ದಾಳಿ ನಡೆದಿದ್ದು, 7 ಕಾರ್ಯಕರ್ತರು...

ಕೇರಳ: ಬಿಜೆಪಿ ಕಚೇರಿಗೆ ಬೆಂಕಿ
ಬಿಜೆಪಿ ಕಚೇರಿ
Published On :
ಕಣ್ಣೂರು: ಬಿಜೆಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಸಿಪಿಐ(ಎಂ) ಕಾರ್ಯಕರ್ತರ ಮೇಲೆ ನಾಡ ಬಾಂಬ್ ದಾಳಿ ನಡೆದಿದ್ದು, 7 ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. 
ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿರುವ ಘಟನೆಯ ಹಿಂದೆ ಸಿಪಿಐ-ಎಂ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿಗಳು, ಈ ಘಟನೆ ನಡೆದ ಬಳಿಕ ಸಿಪಿಐ(ಎಂ) ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೂ ದಾಳಿ ನಡೆದಿರುವ ಕೆಲವು ಘಟನೆಗಳು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.