ದೇಶ

ನನ್ನ ವಿರುದ್ಧ ಎಫ್ಐಆರ್ ಒಂದು ರಾಜಕೀಯ ಷಡ್ಯಂತ್ರ, ಮೈತ್ರಿ ಅಬಾಧಿತ: ತೇಜಸ್ವಿ ಯಾದವ್

ಭ್ರಷ್ಟಾಚಾರ ಆರೋಪ ಸಂಬಂಧ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ವಿರುದ್ಧ ಎಫ್ಐಆರ್ ಒಂದು ರಾಜಕೀಯ ಷಡ್ಯಂತ್ರ, ಮೈತ್ರಿ ಅಬಾಧಿತ: ತೇಜಸ್ವಿ ಯಾದವ್
ತೇಜಸ್ವಿ ಯಾದವ್
Published On :

ಪಾಟ್ನಾ: ಭ್ರಷ್ಟಾಚಾರ ಆರೋಪ ಸಂಬಂಧ ಇದೇ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರ ಪುತ್ರ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರ ಮನೆ ಮೇಲೆ ಸಿಬಿಐ ದಾಳಿ ಮತ್ತು ಲಾಲು ಪುತ್ರಿ ಮಿಸಾ ಭಾರ್ತಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಬಳಿಕ ಇದೇ ಮೊದಲ ಬಾರಿಗೆ ನಡೆದ ಬಿಹಾರ ಸಚಿವ ಸಂಪುಚ  ಸಭೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಯಾದವ್, ಸಂಪುಟ ಸಭೆಯಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಭ್ರಷ್ಟಾಚಾರ ಆರೋಪದ ಹಿನ್ನಲೆಯಲ್ಲಿ ತೇಜಸ್ವಿ ಯಾದವ್ ರಾಜಿನಾಮೆ ನೀಡಬೇಕು ಎಂಬ ಜೆಡಿಯು ನಿಲುವನ್ನು ಸಂಪೂರ್ಣವಾಗಿ ಅಲ್ಲಗಳೆದಿರುವ ತೇಜಸ್ವಿ ಯಾದವ್, ತಾವು ಯಾವುದೇ ಕಾರಣಕ್ಕೂ ರಾಜಿನಾಮೆ ನೀಡುವುದಿಲ್ಲ. ಅಂತೆಯೆ ರಾಜ್ಯದ ಮೈತ್ರಿ ಸರ್ಕಾರ ಯಾವುದೇ ಅಡ್ಡಿ ಇಲ್ಲದೆ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್ ನಾನು 14 ವರ್ಷದವನಾಗಿದ್ದಾಗಲೂ ಸಿಬಿಐ ದಾಳಿಯಾಗಿತ್ತು. ಅಗ ನನಗೆ ಮೀಸೆ ಕೂಡ ಬಂದಿರಲಿಲ್ಲ. 2004ರಲ್ಲಿ ನನ್ನ ವಿರುದ್ಧ ಹಲವು ಭ್ರಷ್ಟಾಚಾರ ಆರೋಪಗಳು ದಾಖಲಾಗಿದ್ದವು. ಒಬ್ಬ 14 ವರ್ಷದ ಬಾಲಕ ಅದ್ಯಾವ ಭ್ರಷ್ಟಾಚಾರ ಮಾಡಲು ಸಾಧ್ಯ ಎಂದು ನನಗೆ ಈಗಲೂ ತಿಳಿದಿಲ್ಲ. ಇದರಿಂದಲೇ ತಿಳಿಯುತ್ತದೆ..  ಭ್ರಷ್ಟಾಚಾರ ಆರೋಪ ಕೇವಲ ರಾಜಕೀಯ ಷಡ್ಯಂತ್ರ. ನರೇಂದ್ರ ಮೋದಿ ಹಾಗೂ  ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಮ್ಮ ರಾಜಕೀಯ ಏಳಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಿದಿದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಅಂತೇಯೇ ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡಿದ ತೇಜಸ್ವಿ ಯಾದವ್, ಅಧಿಕಾರಕ್ಕೆ ಏರುವ ಮುನ್ನವೇ ಭ್ರಷ್ಟಾಚಾರ ವಿರೋಧಿ ನಿಲುವು ತಳೆದು ಮಂತ್ರಿ ಹುದ್ದೆ ಸ್ವೀಕರಿಸಿದ್ದೇನೆ. ನನ್ನ ಬಳಿ ಮೂರು ಪ್ರಮುಖ ಖಾತೆಗಳಿದ್ದು, ಈ ವರೆಗೂ ಈ ಮೂರು ಖಾತೆಗಳಲ್ಲೂ ಕೇವಲ ಒಂದೇ ಒಂದು ಭ್ರಷ್ಟಾಚಾರ ಆರೋಪ ಕೇಳಿಬಂದಿಲ್ಲ. ನನ್ನ ಕರ್ತವ್ಯವನ್ನು ನಾನು ತುಂಬಾ ಶ್ರದ್ಧೆಯಿಂದ ನಿರ್ವಹಿಸುತ್ತಿದ್ದೇನೆ. ಹೀಗಾಗಿ ನಾನು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ. ಹಾಗೂ ಮೈತ್ರಿ ಸರ್ಕಾರಕ್ಕೂ ಯಾವುದೇ ಅಡ್ಡಿ ಇಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.