ಜಮ್ಮು-ಕಾಶ್ಮೀರ: ಮೂವರು ಹಿಜ್ಬುಲ್ ಉಗ್ರರನ್ನು ಹೊಡೆದುರುಳಿಸಿದ ಸೇನೆ, ಶಸ್ತ್ರಾಸ್ತ್ರ ವಶ
ಕಾಶ್ಮೀರದ ಬದ್ಗಾಮ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಸೇನಾ ಪಡೆ ಹೊಡೆದುರುಳಿಸಿದೆ..

Published On :
ಬದ್ಗಾಮ್: ಕಾಶ್ಮೀರದ ಬದ್ಗಾಮ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಸೇನಾ ಪಡೆ ಹೊಡೆದುರುಳಿಸಿದೆ.
ಕಳೆದ ರಾತ್ರಿ ರಕ್ಷಣಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ.
ರಾಷ್ಟ್ರೀಯ ರೈಫಲ್ಸ್ ದಳದ ವಿಶೇಷ ಕಾರ್ಯಾಚರಣೆ ತಂಡ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆ ನಿನ್ನೆ ಸಂಜೆ 6 ಗಂಟೆಯಿಂದ 8.30 ರವರೆಗೆ ಬುದ್ಗಾಮ್ ನ ರಡ್ ಬಗ್ ಗ್ರಾಮದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಇನ್ನೂ ಸತ್ತ ಉಗ್ರರ ಬಳಿಯಿಂದ ಶಸ್ತ್ರಾಸ್ತ್ರಗಳು ಮತ್ತು ಯುದ್ದ ಸಾಮಾಗ್ರಿಗಳನ್ನ ವಶ ಪಡಿಸಿಕೊಂಡಿದ್ದಾರೆ.
ಜಮ್ಮು ಕಾಶ್ಮೀರದ ಅನಂತ್ ನಾಗ್ ನಲ್ಲಿ ಅಮರಾನಾಥ್ ಯಾತ್ರಿಗಳ ಮೇಲೆ ಉಗ್ರರು ನಡೆಸಿದ ದಾಳಿಯ ಪರಿಣಾಮ 7 ಮಂದಿ ಭಕ್ತರು ಸಾವನ್ನಪ್ಪಿ 15 ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirsecurity forcesರಕ್ಷಣಾ ಪಡೆHizbul Mujahideenಹಿಜ್ಬುಲ್ ಮುಜಾಹಿದ್ದೀನ್3 militants killed3 ಉಗ್ರರ ಸಾವು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


