1984 ಸಿಖ್ ವಿರೋಧಿ ಗಲಭೆ ಪ್ರಕರಣ: ಸೋಮವಾರದೊಳಗೆ ಕ್ಯಾಪ್ಟನ್ ಭಾಗ್ಮಲ್ ಶರಣಾಗತಿಗೆ ದೆಹಲಿ ಕೋರ್ಟ್ ಸೂಚನೆ!
1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಪ್ಟನ್ ಭಾಗ್ಮಲ್ ಅವರು ಜುಲೈ 17 ಸೋಮವಾರದೊಳಗೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗಡುವು ನೀಡಿದೆ.

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕ್ಯಾಪ್ಟನ್ ಭಾಗ್ಮಲ್ ಅವರು ಜುಲೈ 17 ಸೋಮವಾರದೊಳಗೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗಡುವು ನೀಡಿದೆ.
1984 ಸಿಖ್ ವಿರೋಧಿ ಗಲಭೆ ಪ್ರಕರಣದ ದೆಹಲಿ ಕಂಟೋನ್ಮೆಂಟ್ ನ ರಾಜ್ ನಗರ ಪ್ರದೇಶದಲ್ಲಿ ಒಂದೇ ಕುಟುಂಬದ ಐವರ ಸಾವಿನ ಪ್ರಕರಣ ಸಂಬಂಧ ಬಾಗ್ಮಲ್ ಅಪರಾಧಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿದ್ದು, ಇದೇ ಪ್ರಕರಣ ಸಂಬಂಧ ಸೋಮವಾರದೊಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ದೆಹಲಿ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ. ಇದೇ ಪ್ರಕರಣ ಸಂಬಂಧ ಈ ಹಿಂದೆ ಕ್ಯಾಪ್ಟನ್ ಭಾಗ್ಮಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ನ್ಯಾಯಾಲಯಕ್ಕೆ ಶರಣಾಗಬೇಕಿದೆ.
ಇದೇ ಪ್ರಕರಣದ ಪ್ರಮುಖ ಆರೋಪಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರೊಂದಿಗೆ ಕ್ಯಾಪ್ಟನ್ ಭಾಗ್ಮಲ್ ಕೂಡ ಅಪರಾಧಿಯಾಗಿದ್ದು, ಭಾಗ್ಮಲ್ ಅವರಿಗೆ ನ್ಯಾಯಾಲಯ ಈ ಹಿಂದೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಹೀಗಾಗಿ ಭಾಗ್ಮಲ್ ಜೈಲು ಸೇರಿದ್ದರಾದರೂ ತಮ್ಮ ಪತ್ನಿಗೆ ಶಸ್ತ್ರಿ ಚಿಕಿತ್ಸೆ ಮಾಡಿಸಬೇಕು ಎಂದು ಕೋರಿ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು.
ಆಗಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ಖೋಖರ್, ಕ್ಯಾಪ್ಟನ್ ಭಾಗ್ಮಾಲ್, ಗಿರ್ಧರಿ ಲಾಲ್ ಮತ್ತು ಇನ್ನಿತರರು ಒಂದು ಕುಟುಂಬದ ಐದು ಸದಸ್ಯರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಈ ಐವರ ಪೈಕಿ ಮೂರು ಆರೋಪಿಗಳು 2013 ರ ಮೇ ತಿಂಗಳಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಪೈಕಿ ಸಜ್ಜನ್ ಕುಮಾರ್ ಅವರನ್ನು ನ್ಯಾಯಾಲಯ ಬಿಡುಗಡೆ ಮಾಡಿತ್ತಾದರೂ, ಖೋಖರ್, ಕ್ಯಾಪ್ಟನ್ ಭಾಗ್ಮಾಲ್, ಗಿರ್ಧರಿ ಲಾಲ್ ಅವರಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


