ದೇಶ

ತಂದೆಯ ಕವಿತೆ ಬಳಸಿದ್ದಕ್ಕೆ ಆಪ್ ನಾಯಕ ಕುಮಾರ್ ವಿಶ್ವಾಸ್ ವಿರುದ್ಧ ಬಚ್ಚನ್ ಗರಂ

ನಟ ಅಮಿತಾಬ್ ಬಚ್ಚನ್ ತಮ್ಮ ತಂದೆ ಹರಿವಂಶ್ ರಾಯ್'ರ ಕವಿತೆಯ ಸಾಲುಗಳನ್ನು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಬಳಸಿಕೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ...

ತಂದೆಯ ಕವಿತೆ ಬಳಸಿದ್ದಕ್ಕೆ ಆಪ್ ನಾಯಕ ಕುಮಾರ್ ವಿಶ್ವಾಸ್ ವಿರುದ್ಧ ಬಚ್ಚನ್ ಗರಂ
ನಟ ಅಮಿತಾಬ್ ಬಚ್ಚನ್
Published On :
ನವದೆಹಲಿ: ನಟ ಅಮಿತಾಬ್ ಬಚ್ಚನ್ ತಮ್ಮ ತಂದೆ ಹರಿವಂಶ್ ರಾಯ್'ರ ಕವಿತೆಯ ಸಾಲುಗಳನ್ನು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಅವರು ಬಳಸಿಕೊಂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 
ಈ ಕುರಿತು ಅಮಿತಾಭ್, ವಿಶ್ವಾಸ್'ಗೆ ಹಕ್ಕು ಸ್ವಾಮ್ಯತೆ ಉಲ್ಲಂಘನೆಯಡಿ ನೋಟಿಸ್ ನೀಡಿದ್ದು, ಈ ಯೂಟ್ಯೂಬ್ ವಿಡಿಯೋದಿಂದ ಸಂಪಾದಿಸಿದ ಮಾಹಿತಿ ನೀಡಲು ಸೂಚಿಸಿದ್ದಾರೆ. 
ಅಮಿತಾಭ್ ಬಚ್ಚನ್ ಅವರಿಂದ ನೋಟಿಸ್ ಪಡೆದ ಬಳಿಕ ಪ್ರತಿಕ್ರಿಯೆ ನೀಡಿರುವ ಕುಮಾರ್ ವಿಶ್ವಾಸ್ ಅವರು, ವಿಡಿಯೋದಲ್ಲಿ ಕಾವ್ಯ ಬಳಕೆ ವಿರುದ್ಧ ಬಿಗ್ ಬಿ ನೋಟಿಸ್ ನೀಡಿದ್ದು, ಈ ವಿಡಿಯೋವನ್ನು ಯೂಟ್ಯೂಬ್ ನಿಂದ ಹಿಂಪಡೆದಿರುವೆ. ಇದರಿಂದ ಬಂದ ರೂ.32 ಅನ್ನು ನೀಡುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.