ಡಿಎಸ್ ಪಿ ಅಯೂಬ್ ಪಂಡಿತ್ ಕೊಲೆ ಮಾಡಿದ್ದ ಉಗ್ರರು ಎನ್ ಕೌಂಟರ್ ಗೆ ಬಲಿ
ಕಾಶ್ಮೀರದ ಡಿಎಸ್ ಪಿ ಅಯೂಬ್ ಪಂಡಿತ್ ರನ್ನು ಕೊಲೆ ಮಾಡಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

Published On :
ಶ್ರೀನಗರ: ಕಾಶ್ಮೀರದ ಡಿಎಸ್ ಪಿ ಅಯೂಬ್ ಪಂಡಿತ್ ರನ್ನು ಕೊಲೆ ಮಾಡಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ಬುದ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಸೇನಾ ಪಡೆಗಳು ಹತ್ಯೆ ಮಾಡಿದ್ದು, ಈ ಪೈಕಿ ಕಾಶ್ಮೀರದ ಡಿಎಸ್ ಪಿ ಅಯೂಬ್ ಪಂಡಿತ್ ಅವರನ್ನು ಹತ್ಯೆ ಮಾಡಿದ ಉಗ್ರರೂ ಇದ್ದಾರೆ ಎಂದು ತಿಳಿದುಬಂದಿದೆ.
ಕಳೆದ ತಿಂಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉಗ್ರರು ಅಯೂಬ್ ಪಂಡಿತ್ ಅವರನ್ನು ಕಲ್ಲಿನಿಂದ ಹೊಡೆದು ಅಮಾನುಷವಾಗಿ ಹತ್ಯೆ ಮಾಡಿದ್ದರು. ಎನ್ ಕೌಂಟರ್ ಗೆ ಬಲಿಯಾಗಿರುವ ಉಗ್ರರ ಪೈಕಿ ಸಜ್ಜದ್ ಅಹ್ಮದ್ ಗಿಲ್ಕರ್ ಎಂಬ ಉಗ್ರ ಏಪ್ರಿಲ್ ತಿಂಗಳಿನಲ್ಲಿ ಸಿಆರ್ ಪಿಎಫ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎನ್ ಕೌಂಟರ್DSP Ayub PandithHizbul Mujahideen terroristಡಿಎಸ್ ಪಿ ಅಯೂಬ್ ಪಂಡಿತ್ಹಿಜ್ಬುಲ್ ಮುಜಾಹಿದ್ದೀನ್ ಉಗ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


