ದೇಶ

ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಚೀನಾ ಮಧ್ಯಸ್ಥಿಕೆ ಬೇಡ: ಭಾರತ

ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಚೀನಾ ಮಧ್ಯಸ್ಥಿಕೆ ಬೇಡ ಎಂದು ಭಾರತ ಗುರುವಾರ ಹೇಳಿದೆ.

ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಚೀನಾ ಮಧ್ಯಸ್ಥಿಕೆ ಬೇಡ: ಭಾರತ
ಸಂಗ್ರಹ ಚಿತ್ರ
Published On :

ನವದೆಹಲಿ: ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಚೀನಾ ಮಧ್ಯಸ್ಥಿಕೆ ಬೇಡ ಎಂದು ಭಾರತ ಗುರುವಾರ ಹೇಳಿದೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಗೋಪಾಲ್ ಬಾಗ್ಲೆ ಅವರು, ಕಾಶ್ಮೀರ ವಿಚಾರವೂ ಸೇರಿದಂತೆ ಭಾರತ-ಪಾಕಿಸ್ತಾನದ ನಡುವಿನ ಸಂಬಂಧ ಸುಧಾರಣೆಗಾಗಿ ಚೀನಾ ಮಧ್ಯ ಪ್ರವೇಶ  ಅನಗತ್ಯ. ದ್ವಿಪಕ್ಷೀಯ ಮಾತುಕತೆ ಮೂಲಕ ನಾವೇ ಸಮಸ್ಯೆಯನ್ನು ಪರಿಹರಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಕಾಶ್ಮೀರ ವಿಚಾರ ಚರ್ಚೆಗೆ ತೊಡಕಾಗಿರುವ ಏಕೈಕ ಅಂಶ ಅದು ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆ ಎಂಬ ವಿಚಾರ ಇಡೀ ವಿಶ್ವಕ್ಕೇ ತಿಳಿದಿದೆ. ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಭಾರತ ಸಿದ್ಧವಿದ್ದು, ಅದು  ಕೇವರ ದ್ವಿಪಕ್ಷೀಯ ಮಾತುಕತೆ ಮೂಲಕ ಮಾತ್ರ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಾಕಿಸ್ತಾನ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇ ಬೇಕು. ಭಾರತದಲ್ಲಿ ನಡೆಯುತ್ತಿರುವ ಉಗ್ರ ದಾಳಿಗಳು  ಪಾಕಿಸ್ತಾನದಿಂದಲೇ ಸಂಯೋಜನೆಗೊಳ್ಳುತ್ತಿದ್ದು, ಈ ಬಗ್ಗೆ ಪಾಕಿಸ್ತಾನ ಖಂಡಿತವಾಗಿಯೂ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ದ್ವಿಪಕ್ಷೀಯ ಚರ್ಚೆಗೆ ಬಲ ಬರುತ್ತದೆ ಎಂದೂ ಬಾಗ್ಲೆ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಚೀನಾದ ವಿದೇಶ ವ್ಯವಹಾರಗಳ ಇಲಾಖೆಯ ವಕ್ತಾರ ಜೆಂಗ್ ಶುವಾಂಗ್ ಅವರು ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿ, ಕಾಶ್ಮೀರ ವಿವಾದದಲ್ಲಿ ರಚನಾತ್ಮಕ ಪಾತ್ರ ವಹಿಸಲು  ಚೀನಾ ಸಿದ್ಧ ಎಂದು  ಹೇಳಿದ್ದರು. ಅಂತೆಯೇ ಭಾರತ-ಪಾಕಿಸ್ತಾನಗಳು ದಕ್ಷಿಣ ಏಷ್ಯಾದ ಪ್ರಮುಖ ರಾಷ್ಟ್ರಗಳಾಗಿದ್ದು, ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ಸಂಬಂಧ ಪದೇ ಪದೇ  ಹಾಳಾಗುತ್ತಿದೆ ಎಂದು ಹೇಳಿದ್ದಾರೆ. ಅಂತೆಯೇ  ಭಾರತ-ಪಾಕ್ ನಡುವಿನ ಉದ್ವೇಗದ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಕಾಶ್ಮೀರದ ಗಡಿನಿಯಂತ್ರಣಾ ರೇಖೆಯ ಬಳಿ ತಿಕ್ಕಾಟ ಉಂಟಾಗಿದೆ. ಇದರಿಂದ ಉಭಯ  ರಾಷ್ಟ್ರಗಳ ಶಾಂತಿ ಮತ್ತು ಸ್ಥಿರತೆಗೆ ಧಕ್ಕೆ  ಒದಗಿರುವುದರ ಜೊತೆಗೆ ಇಡೀ ಪ್ರದೇಶದ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗಿದೆ ಎಂದು ಹೇಳಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಭಾರತ ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಚೀನಾ ಮಧ್ಯಸ್ಥಿಕೆ ಬೇಡ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.