ದೇಶ

ಕೇಂದ್ರ ಸರ್ಕಾರ ಗಣಿತ ಶಿಕ್ಷಕರ ಹುಡುಕಾಟದಲ್ಲಿದೆ: ರಾಹುಲ್ ವಾಗ್ದಾಳಿ

ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರದ್ದುಗೊಂಡ 500, 1000 ರೂ ಮುಖಬೆಲೆಯ ನೋಟುಗಳನ್ನು ಇನ್ನೂ ಎಣಿಕೆ ಮಾಡುತ್ತಿದ್ದೇವೆ ಎಂದು ಸಂಸದೀಯ ಸಮಿತಿಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್

ಕೇಂದ್ರ ಸರ್ಕಾರ ಗಣಿತ ಶಿಕ್ಷಕರ ಹುಡುಕಾಟದಲ್ಲಿದೆ:  ರಾಹುಲ್ ವಾಗ್ದಾಳಿ
ರಾಹುಲ್ ಗಾಂಧಿ
Published On :
ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 
ರದ್ದುಗೊಂಡ 500, 1000 ರೂ ಮುಖಬೆಲೆಯ ನೋಟುಗಳನ್ನು ಇನ್ನೂ ಎಣಿಕೆ ಮಾಡುತ್ತಿದ್ದೇವೆ ಎಂದು ಸಂಸದೀಯ ಸಮಿತಿಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಸಿಯಿಸಿರುವ ರಾಹುಲ್,  ಕೇಂದ್ರ ಸರ್ಕಾರಕ್ಕೆ ಗಣಿತ ಶಿಕ್ಷಕರ ಅವಶ್ಯಕತೆಯಿದೆ ಎಂದು ಟೀಕಿಸಿದ್ದಾರೆ.
ಭಾರತ ಸರ್ಕಾರ ಗಣಿತ ಶಿಕ್ಷಕರ ಹುಡುಕಾಟದಲ್ಲಿದೆ. ದಯಮಾಡಿ ಈ ಹುದ್ದೆಗೆ ಅರ್ಜಿ ಸಲ್ಲಿಸಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಜು.12 ರಂದು ಸಂಸದೀಯ ಸಮಿತಿ ಸಭೆಗೆ ಹಾಜರಾಗಿದ್ದ ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಆರ್ ಬಿ ಐ ಪ್ರತಿನಿಧಿಗಳು, ಬ್ಯಾಂಕ್ ಗಳಿಗೆ ವಾಪಸ್ ಬಂದಿರುವ ರದ್ದುಗೊಂಡಿದ್ದ ನೋಟುಗಳ ಎಣಿಕೆ ಕಾರ್ಯ ಮಾಡುತ್ತಿದ್ದಾರೆ. ಕೆಲಸದಲ್ಲಿ ಮತ್ತಷ್ಟು ಪ್ರಗತಿ ಸಾಧಿಸಲು ಹೊಸ ಕರೆನ್ಸಿ ವೇರಿಫಿಕೇಷನ್ ಪ್ರೊಸೆಸಿಂಗ್ ಸಿಸ್ಟಂ (ಸಿವಿಪಿಎಸ್) ನ್ನು ಖರೀದಿಸಲು ಟೆಂಡರ್ ಕರೆಯಲಾಗಿದೆ ಎಂದು ಉರ್ಜಿತ್ ಪಟೇಲ್ ಹೇಳಿದ್ದರು. 
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಪಿ.ಚಿದಂಬರಂ ಸರ್ಕಾರ ಲೀಸ್ ಪಡೆಯುವಾಗ ಏಕೆ ಹೆಚ್ಚಿನ ಪ್ರಮಾಣದ ಯಂತ್ರಗಳನ್ನು ಖರೀದಿಸಿಲು ಬಯಸಿತ್ತು ಎಂಬುದರಕ ಬಗ್ಗೆ  ಆಶ್ಚರ್ಯ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.