ಶಿಕ್ಷಣಕ್ಕೆ ಮೊಬೈಲ್ ಅಡ್ಡಿ: ಮಹಾರಾಜ ಹರೀಶ್ ಚಂದ್ರ ಪಿಜಿ ಕಾಲೇಜ್ ನಲ್ಲಿ ಮೊಬೈಲ್ ಬ್ಯಾನ್!
ವಿದ್ಯಾರ್ಥಿಗಳ ಅಧ್ಯಯನಕ್ಕೆ ಮೊಬೈಲ್ ಅಡ್ಡಿಯಾಗುತ್ತಿದ್ದು, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಉತ್ತರ ಪ್ರದೇಶದ ಮಹಾರಾಜ ಹರೀಶ್ ಚಂದ್ರ ಪಿಜಿ ಕಾಲೇಜ್ ನಲ್ಲಿ ಮೊಬೈಲ್ ಫೋನ್ ಗಳನ್ನು ಬ್ಯಾನ್

Published On :
ಲಖನೌ: ವಿದ್ಯಾರ್ಥಿಗಳ ಅಧ್ಯಯನಕ್ಕೆ ಮೊಬೈಲ್ ಅಡ್ಡಿಯಾಗುತ್ತಿದ್ದು, ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಉತ್ತರ ಪ್ರದೇಶದ ಮಹಾರಾಜ ಹರೀಶ್ ಚಂದ್ರ ಪಿಜಿ ಕಾಲೇಜ್ ನಲ್ಲಿ ಮೊಬೈಲ್ ಫೋನ್ ಗಳನ್ನು ಬ್ಯಾನ್ ಮಾಡಲಾಗಿದೆ.
ಕಾಲೇಜ್ ಕ್ಯಾಂಪಸ್ ನಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿದ್ದು, ವಿದ್ಯಾರ್ಥಿಗಳು ಮೊಬೈಲ್ ನಿಂದಾಗಿ ಓದಿನಿಂದ ವಿಮುಖರಾಗುತ್ತಿದ್ದಾರೆ ಎಂಬ ಕಾರಣ ನೀಡಿ ಮೊಬೈಲ್ ಬಳಕೆಗೆ ನಿಷೇಧ ವಿಧಿಸಲಾಗಿದೆ. ಕಾಲೇಜಿನ ಕ್ರಮವನ್ನು ಸಮರ್ಥಿಸಿಕೊಂಡಿರುವ ಪ್ರಾಂಶುಪಾಲ ಡಾ.ವಿಶೇಷ್ ಗುಪ್ತಾ ಮೊಬೈಲ್ ಬಳಕೆಯಲ್ಲೇ ವಿದ್ಯಾರ್ಥಿಗಳು ಹೆಚ್ಚಿನ ಸಮಯ ಕಳೆಯುತ್ತಿದ್ದು ಓದಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದ್ದಾರೆ.
ಸಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಿರುವ ವಿದ್ಯಾರ್ಥಿಗಳು, ಫೋನ್ ನಲ್ಲಿ ಹುಡುಗಿಯರೊಂದಿಗೆ ನಿರಂತರವಾಗಿ ಮಾತನಾಡುತ್ತಿರುತ್ತಾರೆ, ಮೊಬೈಲ್ ಬಳಕೆಯನ್ನು ನಿಷೇಧಿಸಲು ಇದೂ ಒಂದು ಕಾರಣ ಎಂದು ಪ್ರಾಂಶುಪಾಲರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶಮೊಬೈಲ್ ಫೋನ್mobile phonesMaharaja Harish Chandra PG Collegeಮಹಾರಾಜ ಹರೀಶ್ ಚಂದ್ರ ಕಾಲೇಜು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


