ಚೀನಾ ಬಿಕ್ಕಟ್ಟು: ವಿರೋಧ ಪಕ್ಷಗಳಿಗೆ ಸುಷ್ಮಾ, ರಾಜನಾಥ್ ವಿವರಣೆ
ಭಾರತ-ಚೀನಾ ಗಡಿ ಬಿಕ್ಕಟ್ಟು ಮತ್ತು ಕಾಶ್ಮೀರ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿರೋಧ ಪಕ್ಷಗಳ ಮುಖಂಡರಿಗೆ ವಿವರಣೆ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ...

Published On :
ನವದೆಹಲಿ: ಭಾರತ-ಚೀನಾ ಗಡಿ ಬಿಕ್ಕಟ್ಟು ಮತ್ತು ಕಾಶ್ಮೀರ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ವಿರೋಧ ಪಕ್ಷಗಳ ಮುಖಂಡರಿಗೆ ವಿವರಣೆ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.
ಉಭಯ ರಾಷ್ಟ್ರಗಳ ನಡುವೆ ಎದುರಾಗಿರುವ ಬಿಕ್ಕಟ್ಟು ಕುರಿತಂತೆ ಸಭೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಸಭೆಗೆ ಪ್ರಮುಖ ವಿರೋಧ ಪಕ್ಷಗಳ ಸದಸ್ಯರನ್ನು ಆಹ್ವಾನಿಸಿದ್ದಾರೆಂದು ವರದಿಗಳು ತಿಳಿಸಿವೆ.
ಸಭೆಯಲ್ಲಿ ಭಾರತ ಮತ್ತು ಚೀನಾ ಗಡಿ ಮತ್ತು ಜಮ್ಮು-ಕಾಶ್ಮೀರದ ಸ್ಥಿತಿಗತಿಯ ಬಗ್ಗೆ ರಾಜನಾಥ ಸಿಂಗ್ ಮತ್ತು ಸುಷ್ಮಾ ಸ್ವರಾಜ್ ಅವರು ವಿಸ್ತೃತ ಮಾಹಿತಿ ಮತ್ತು ಸರ್ಕಾರದ ಕ್ರಮಗಳನ್ನು ವಿವರಿಸಲಿದ್ದಾರೆ.
ಸೋಮವಾರದಿಂದ ಸಂಸತ್ತಿನಲ್ಲಿ ಅಧಿವೇಶನ ಆರಂಭಗೊಳ್ಳುತ್ತಿದ್ದು, ಅದಕ್ಕೂ ಮುನ್ನ ಚೀನಾ ಮತ್ತು ಕಾಶ್ಮೀರ ವಿಚಾರವಾಗಿ ಒಮ್ಮತ ಮೂಡಿಸಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
oppositionKashmirRajnath SinghSushma Swarajಸುಷ್ಮಾ ಸ್ವರಾಜ್ಕಾಶ್ಮೀರರಾಜನಾಥ ಸಿಂಗ್ವಿರೋಧ ಪಕ್ಷಗಳುChina Stand offಚೀನಾ ಬಿಕ್ಕಟ್ಟು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


