ತ್ರಾಲ್ ನಲ್ಲಿ ಉಗ್ರ ನಿಗ್ರಹ ಕಾರ್ಯಾಚರಣೆ: ಸೈನಿಕರ ಗುಂಡಿಗೆ 3 ಉಗ್ರರು ಹತ!
ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ ಮುಂದುವರೆದಿರುವಂತೆಯೇ ಉಗ್ರರ ದಾಳಿಗೆ ಖಡಕ್ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಶನಿವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಶ್ರೀನಗರ: ಕಣಿವೆ ರಾಜ್ಯದಲ್ಲಿ ಉಗ್ರರ ದಾಳಿ ಮುಂದುವರೆದಿರುವಂತೆಯೇ ಉಗ್ರರ ದಾಳಿಗೆ ಖಡಕ್ ಉತ್ತರ ನೀಡುತ್ತಿರುವ ಭಾರತೀಯ ಸೇನೆ ಶನಿವಾರ 3 ಉಗ್ರರನ್ನು ಹೊಡೆದುರುಳಿಸಿದೆ.
ಉತ್ತರ ಪುಲ್ವಾಮ ಜಿಲ್ಲೆಯ ತ್ರಾಲ್ ನ ಸತೋರಾ ಪ್ರದೇಶದಲ್ಲಿ ಉಗ್ರರು ಅವಿತಿಕರುವ ಕುರಿತು ಖಚಿತ ಮಾಹಿತಿ ಪಡೆದ ಸಿಆರ್ ಪಿಎಫ್ ಹಾಗೂ ಸೇನಾ ಯೋಧರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಸೇನೆಯ ಗುಂಡಿಗೆ 3 ಉಗ್ರರು ಹತರಾಗಿದ್ದರೆ ಮತ್ತೋರ್ವನಿಗಾಗಿ ಹುಡುಕಾಟ ನಡೆದಿದೆ. ಘಟನಾ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಘಟನಾ ಪ್ರದೇಶವನ್ನು ಸೈನಿಕರು ಸುತ್ತುವರೆದಿದ್ದಾರೆ.
ಕಳೆದ ಜುಲೈ 9ರಂದು ಇದೇ ತ್ರಾಲ್ ನ ಸೇನಾ ಕ್ಯಾಂಪ್ ಮೇಲೆ ಉಗ್ರರು ಗ್ರೆನೇಡ್ ದಾಳಿ ಮಾಡಿದ್ದರು.ಈ ವೇಳೆ ಓರ್ವ ಯೋಧ ಗಾಯಗೊಂಡಿದ್ದರು ಎಂದು ತಿಳಿದುಬಂದಿದೆ. ಸೇನಾ ಮೂಲಗಳ ಪ್ರಕಾರ ಕಳೆದ ಜನವರಿಯಿಂದ ಈ ವರೆಗೂ ಕಣಿವೆರಾಜ್ಯದಲ್ಲಿ ಒಟ್ಟು 102 ಮಂದಿ ಉಗ್ರರನ್ನು ಸೇನೆ ಹತ್ಯೆಗೈದಿದೆ ಎಂದು ತಿಳಿದುಬಂದಿದೆ. ಕಳೆದ 7 ವರ್ಷಗಳಲ್ಲಿಯೇ ಈ ಬಾರಿಯೇ ಅತ್ಯಧಿಕ ಸಂಖ್ಯೆಯಲ್ಲಿ ಉಗ್ರರನ್ನು ಕೊಲ್ಲಲಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


