ದೇಶ

ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ

ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ...

ಅಮರನಾಥ ಯಾತ್ರಾರ್ಥಿಗಳ ಮೇಲೆ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 8ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :
ಶ್ರೀನಗರ: ಅಮರನಾಥ ಯಾತ್ರಾರ್ಥಿಗಳ ಮೇಲಿನ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 
47 ವರ್ಷದ ಲಲಿತಾ ಎಂಬ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಉಗ್ರರ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಲಲಿತಾ ಅವರನ್ನು ಶ್ರೀನಗರದ ಸ್ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಇಂದು ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ. 
ಜು.10 ರಾತ್ರಿ 8.20 ಸುಮಾರಿಗೆ ಉಗ್ರರ ಗುಂಪೊಂದು ಅಮರನಾಥ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ದಾಳಿ ನಡೆಸಿತ್ತು. ಬ್ಯಾಟೆಂಗೂ ಹಾಗೂ  ಖಾನಾಬಾಲ್ ಗಳಲ್ಲಿ ಶಸ್ತ್ರಸಜ್ಜಿದ ಭಯೋತ್ಪಾದಕರ ಗುಂಪು ಪೊಲೀಸ್ ಬೆಂಗಾವಲು ಪಡೆಯ ಮೇಲೆ ದಾಳಿ ನಡೆಸಿತ್ತು, ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಸಿಲುಕಿಕೊಂಡಿತ್ತು. ಉಗ್ರರು ಮನೋಇಚ್ಛೆ ನಡೆಸಿದ್ದ ಗುಂಡಿನ ದಾಳಿಗೆ 7 ಯಾತ್ರಿಗಳು ಸಾವನ್ನಪ್ಪಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.