ಡೋಕ್ಲಾಮ್, ಕಾಶ್ಮೀರ ವಿವಾದ: 2ನೇ ದಿನವೂ ವಿಪಕ್ಷಗಳಿಗೆ ವಿವರಣೆ ನೀಡಿದ ಸರ್ಕಾರ
ಡೋಕ್ಲಾಮ್ ಗಡಿ ವಿವಾದ ಹಾಗೂ ಕಾಶ್ಮೀರದಲ್ಲಿನ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಕರೆಯಲಾಗಿದ್ದ ಸಭೆಯಲ್ಲಿ ಗೈರಾಗಿದ್ದ ವಿಪಕ್ಷಗಳ ನಾಯಕರಿಗೆ ಮತ್ತೆ ಸಭೆ ಕರೆದ ಕೇಂದ್ರ ಸರ್ಕಾರದ ವಿವರಣೆ ನೀಡಿದೆ ಎಂದು ಭಾನುವಾರ ತಿಳಿದುಬಂದಿದೆ...

Published On :
ನವದೆಹಲಿ: ಡೋಕ್ಲಾಮ್ ಗಡಿ ವಿವಾದ ಹಾಗೂ ಕಾಶ್ಮೀರದಲ್ಲಿನ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಕರೆಯಲಾಗಿದ್ದ ಸಭೆಯಲ್ಲಿ ಗೈರಾಗಿದ್ದ ವಿಪಕ್ಷಗಳ ನಾಯಕರಿಗೆ ಮತ್ತೆ ಸಭೆ ಕರೆದ ಕೇಂದ್ರ ಸರ್ಕಾರದ ವಿವರಣೆ ನೀಡಿದೆ ಎಂದು ಭಾನುವಾರ ತಿಳಿದುಬಂದಿದೆ.
ಈ ಕುರಿತಂತೆ ಕೇಂದ್ರ ಸರ್ಕಾರದ ವಕ್ತಾರ ಪ್ರತಿಕ್ರಿಯೆ ನೀಡಿದ್ದು, ಡೋಕ್ಲಾಮ್ ವಿವಾದ ಹಾಗೂ ಕಾಷ್ಮೀರ ವಿಚಾರ ಕುರಿತಂತೆ ಶುಕ್ರವಾರ ಕರೆಯಲಾಗಿದ್ದ ಸಭೆಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಗೃಹ ಸಚಿವ ರಾಜನಾಥ ಸಿಂಗ್, ರಕ್ಷಣಾ ಸಚಿವ ಅರುಣ್ ಜೇಟ್ಲಿ ಅವರು 14 ವಿರೋಧ ಪಕ್ಷಗಳ ನಾಯಕರಿಗೆ ವಿವರಣೆ ನೀಡಿದ್ದರು. ಅಂದಿನ ಸಭೆಯಲ್ಲಿ ಗೈರಾಗಿದ್ದ ಮತ್ತಿತರೆ ವಿಪಕ್ಷಗಳ ನಾಯಕರಿಗೆ ಶನಿವಾರ ಮತ್ತೆ ಸಭೆ ನಡೆಸಿ ಎರಡನೇ ದಿನವೂ ವಿವರಣೆ ನೀಡಲಾಯಿತು ಎಂದು ಹೇಳಿದ್ದಾರೆ.
ಶುಕ್ರವಾರ ನಡೆದ ಸಭೆಯಲ್ಲಿ ಜೆಡಿಎಸ್, ಸಿಪಿಐ, ಆರ್'ಎಸ್'ಪಿ, ಜೆಎಂಎಂ, ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್, ಅಕಾಲಿ ದಳ, ಕಾಂಗ್ರೆಸ್, ಟಿಎಂಸಿ, ಸಿಪಿಐ-ಎಂ, ಜೆಡಿ-ಯು, ಡಿಎಂಕೆ, ಬಿಎಸ್'ಪಿ ಎನ್ ಸಿಪಿ ಮತ್ತು ಇನ್ನಿತರೆ ಪಕ್ಷಗಳು ಹಾಜರಿದ್ದವು. ಸಭೆಯಲ್ಲಿ ಚೀನಾ ಮತ್ತು ಭಾರತದ ಗಡಿಯಲ್ಲಿ ಮತ್ತು ಜಮ್ಮು-ಕಾಶ್ಮೀರದಲ್ಲಿನ ಪರಿಸ್ಥಿತಿಗಳು ತೀರಾ ಹದಗೆಡುತ್ತಿದ್ದು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆಂದು ತಿಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಾಜಾ ಅವರು, ಭಾರತ, ಚೀನಾ ಮತ್ತು ಭೂತಾನ್ ಸಂಬಂಧಿಸಿದ ಡೋಕ್ಲಾಮ್ ಪ್ರದೇಶದಲ್ಲಿ ಹಲವಾರು ವ್ಯತ್ಯಾಗಳಿವೆ. ಗಡಿ ವಿವಾದ ಸಂಬಂಧ ಪ್ರಸ್ತುತ ಸಂಧಾನ ಪ್ರಕ್ರಿಯೆಗಳು ಮುಂದುವರೆದಿದ್ದು, ಗಡಿಯಲ್ಲಿ ಯಾವುದೇ ಉದ್ನಿಗ್ನತೆಯಿಲ್ಲ ಎಂದು ಸಭೆಯಲ್ಲಿ ಸರ್ಕಾರ ತಿಳಿಸಿದೆ. ಡೋಕ್ಲಾಮ್ ವಿವಾದವನ್ನು ಸಾಧ್ಯವಾದಷ್ಟು ಶೀಘ್ರಗತಿಯಲ್ಲಿ ಬಗೆಹರಿಸುವಂತೆಯೂ ಸರ್ಕಾರತ್ತೆ ಸಲಹೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಆದರೆ, ಸಭೆಯಲ್ಲಿ ಕಾಶ್ಮೀರದ ವಿಚಾರ ಸಂಬಂಧ ಯಾವುದೇ ಚರ್ಚೆಗಳನ್ನು ನಡೆಸಲಾಗಲಿಲ್ಲ. ಆದರೆ, ಅಮರನಾಥ ಯಾತ್ರೆ ಮೇಲಿನ ಉಗ್ರರ ದಾಳಿ ಪ್ರಕರಣದ ಕುರಿತು ಚರ್ಚೆ ನಡೆಯಿತು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


