ದೇಶ

ತೇಜಸ್ವಿ ಆಯ್ಕೆಯಾಗಿದ್ದು ಜನರಿಂದಲೇ ಹೊರತು ನಿಮ್ಮಿಂದಲ್ಲ: ನಿತೀಶ್'ಗೆ ಲಾಲು

ತೇಜಸ್ವಿ ಯಾದವ್ ಅವರನ್ನು ಜನರು ಆಯ್ಕೆ ಮಾಡಿದ್ದಾರೆಯೇ ಹೊರತು ರಾಜಿನಾಮೆ ಕೇಳುತ್ತಿರುವವರಲ್ಲ. ತೇಜಸ್ವಿ ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ಕೊಡುವುದಿಲ್ಲ ಎಂದು ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ...

ತೇಜಸ್ವಿ ಆಯ್ಕೆಯಾಗಿದ್ದು ಜನರಿಂದಲೇ ಹೊರತು ನಿಮ್ಮಿಂದಲ್ಲ: ನಿತೀಶ್'ಗೆ ಲಾಲು
ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (ಸಂಗ್ರಹ ಚಿತ್ರ)
Published On :
ಪಾಟ್ನ: ತೇಜಸ್ವಿ ಯಾದವ್ ಅವರನ್ನು ಜನರು ಆಯ್ಕೆ ಮಾಡಿದ್ದಾರೆಯೇ ಹೊರತು ರಾಜಿನಾಮೆ ಕೇಳುತ್ತಿರುವವರಲ್ಲ. ತೇಜಸ್ವಿ ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ಕೊಡುವುದಿಲ್ಲ ಎಂದು ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಹೇಳಿದ್ದಾರೆ. 
ಆರ್'ಜೆಡಿ ಮುಖ್ಯಸ್ಥ ಲಾಲೂ ಪುತ್ರರೂ ಆಗಿರುವ ಬಿಹಾರ ರಾಜ್ಯ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಅಕ್ರಮ ಆಸ್ತಿ ಗಳಿಸಿದ್ದಾರೆಂಬ ಆರೋಪಗಳು ಕೇಳಿ ಬಂದಿತ್ತು. ಈ ಆರೋಪ ಬಿಹಾರ ರಾಜ್ಯ ರಾಜಕೀಯದಲ್ಲಿ ತಲ್ಲಣವನ್ನು ಮೂಡಿಸಿದ್ದು, ಮಹಾಮೈತ್ರಿ ಪಕ್ಷಗಳ ಮಧ್ಯೆ ಉಂಟಾಗಿರುವ ಬಿರುಕು ಬಿಹಾರ ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ಪರಿಸ್ಥಿತಿ ಎದುರಾಗುವಂತೆ ಮಾಡಿದೆ. 
ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಜೆಡಿಯು ಪಕ್ಷದ ನಾಯಕರು ತೇಜಸ್ವಿಯವರ ರಾಜಿನಾಮೆಗೆ ಆಗ್ರಹಿಸುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲಾಲೂ ಪ್ರಸಾದ್ ಯಾದವ್ ಅವರು, ತೇಜಸ್ವಿ ಯಾದವ್ ಅವರು ಯಾವುದೇ ಕಾರಣಕ್ಕೂ ರಾಜಿನಾಮೆಯನ್ನು ನೀಡಬಾರದುಎಂದು ಪಕ್ಷದ ವಿಧಾನಮಂಡಳ ನಿರ್ಧಾರ ತೆಗೆದುಕೊಂಡಿದೆ. ಕೇವಲ ಎಫ್ಐಆರ್ ದಾಖಲಾಗಿದೆ ಎಂಬ ಕಾರಣಕ್ಕೆ ರಾಜಿನಾಮೆಯನ್ನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.