ದೇಶ

ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ, ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸೂಚನೆ!

ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ.. ಕೂಡಲೇ ಇಂತಹ ಪ್ರಕರಣಗಳ ವಿರುದ್ಧ...

ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ, ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸೂಚನೆ!
ದೆಹಲಿಯಲ್ಲಿ ನಡೆದ ಸರ್ವಪಕ್ಷ ಸಭೆ
Published On :

ನವದೆಹಲಿ: ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ.. ಕೂಡಲೇ ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಭಾನುವಾರ ನಡೆದ ಸರ್ವಪಕ್ಷ ನಾಯಕರ ಸಭೆಯಲ್ಲಿ ಪ್ರಧಾನಿ ಮೋದಿ ಇಂತಹುದೊಂದು ಸೂಚನೆ ನೀಡಿದ್ದು, ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಗಳು ಸ್ವತಂತ್ರ್ಯ ಎಂಬ ಸಂದೇಶ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಮುಕ್ತಾರ್ ಅಬ್ಬಾಸ್ ನಖ್ವಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಗೋರಕ್ಷಣೆ ಹೆಸರಲ್ಲಿ ಹಿಂಸಾಚಾರಕ್ಕಿಳಿಯುವುದನ್ನು  ಕೇಂದ್ರ ಸರ್ಕಾರ ಸಹಿಸುವುದಿಲ್ಲ. ಹಿಂಸಾಚಾರಿಗಳ ವಿರುದ್ಧ ಸೂಕ್ತ ಕ್ರಮ ಹಾಗೂ ತನಿಖೆ ನಡೆಸುವುದಾಗಿ ಕೇಂದ್ರ ಸರ್ಕಾರ ಆಶ್ವಾಸನೆ ನೀಡಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಗೋರಕ್ಷಣೆ ಹಿಂಸಾಚಾರಕ್ಕೆ ರಾಜಕೀಯ ಬಣ್ಣ ಅಥವಾ ಕೋಮು ಬಣ್ಣ ಬಳಿಯದಂತೆ ರಾಜಕೀಯ ಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ ಮಾಡಿದ್ದು, ಇಂತಹ ಕೃತ್ಯಗಳಿಂದ ದೇಶಕ್ಕಾಗುವ ಲಾಭವೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಈಶಾನ್ಯ ಭಾರತದಲ್ಲಿ ಸಂಭವಿಸುತ್ತಿರುವ ಪ್ರವಾಹದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಅಧಿಕಾರಿಗಳಿಂಗ ವರದಿ ತರಿಸಿಕೊಂಡು ರಾಜ್ಯಗಳಿಗೆ ಬೇಕಾದ ಸೂಕ್ತ ನೆರವು ನೀಡುವಲ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಂಗಾರು ಅಧಿವೇಶ ಆರಂಭವಾಗುವ ಹಿನ್ನಲೆಯಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ಮನವಿ ಮಾಡಲು ಪ್ರಧಾನಿ ಮೋದಿ ಈ ಸರ್ವ ಪಕ್ಷ ಸಭೆಯನ್ನು ಕರೆದಿದ್ದರು. ಇಂದಿನ ಸಭೆಯಲ್ಲಿ ಜೆಡಿಯು, ತೃಣಮೂಲ ಕಾಂಗ್ರೆಸ್ ಪಕ್ಷದ ಮುಖಂಡರು ಗೈರಾಗಿದ್ದರು. ಕರ್ನಾಟಕದಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಸಭೆಯಲ್ಲಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.