ಅಮರನಾಥ ಯಾತ್ರಿಕರ ಬಸ್ ಅಪಘಾತ ಪ್ರಕರಣ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ, ಸಿಎಂ ನಿತೀಶ್
ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಘಟನೆಯಲ್ಲಿ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ...

Published On :
ಜಮ್ಮು: ಅಮರನಾಥ ಯಾತ್ರಾರ್ಥಿಗಳ ಬಸ್ ಅಪಘಾತಕ್ಕೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದುರ್ಘಟನೆಯಲ್ಲಿ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಬಿಹಾರ ರಾಜ್ಯ ಮುಖ್ಯಮಂತ್ರಿ ಪರಿಹಾರ ಘೋಷಣೆ ಮಾಡಿದ್ದಾರೆ.
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಮೃತಪಟ್ಟ ಯಾತ್ರಿಕರ ಕುಟುಂಬಸ್ಥರಿಗೆ ರೂ.2 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಅಪಘಾತದಕ್ಕೀಡಾದ ಬಸ್ ನಲ್ಲಿ ಬಹುತೇಕರು ರಾಜಸ್ತಾನ ಹಾಗೂ ಬಿಹಾರ ರಾಜ್ಯದ ಮೂಲದವರೇ ಆಗಿದ್ದು, ಇದರಂತೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೂ ಕೂಡ ಅಪಘಾತದಲ್ಲಿ ಮೃತಪಟ್ಟಿರುವ ತಮ್ಮ ರಾಜ್ಯದ ಜನರಿಗೆ ರೂ.4 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಅಮರನಾಥ ಯಾತ್ರಾರ್ಥಿಗಳ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ಕೆಲವೇ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಮತ್ತೊಂದು ದುರಂತ ಇದಾಗಿದೆ. ಅಮರನಾಥ ಯಾತ್ರಿಕರನ್ನು ಸಾಗಿಸುತ್ತಿದ್ದ ಬಸ್'ವೊಂದು ನಿನ್ನೆ ನಾಚ್ಲಾನಾ ಕಣಿವೆ ಮಾರ್ಗದಲ್ಲಿ ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡು ಅಪಘಾತಕ್ಕೀಡಾಗಿತ್ತು. ಈ ವೇಳೆ ಬಸ್ ಕದಕಕ್ಕೆ ಉರುಳಿಬಿದ್ದಿ ಪರಿಣಾಮ 17 ಮಂದಿ ಯಾತ್ರಿಕರು ಸಾವನ್ನಪ್ಪಿ. 35ಕ್ಕೂ ಹೆಚ್ಚು ಮಂದಿಗೆ ಗಾಯವಾಗಿಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Modiಅಪಘಾತಜಮ್ಮು ಮತ್ತು ಕಾಶ್ಮೀರaccidentಪರಿಹಾರbusjammu-kashmirಬಸ್ಮೋದಿex-gratiaAmarnath pilgrimsಅಮರನಾಥ ಯಾತ್ರಿಕರು
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


