ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ, ಓರ್ವ ಭಾರತೀಯ ಯೋಧನಿಗೆ ಗಾಯ
ಪಾಕಿಸ್ತಾನ ಸೇನೆ ಸೋಮವಾರ ಒಂದೇ ದಿನದಲ್ಲಿ ಎರಡನೇ ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ....

Published On :
ನವದೆಹಲಿ: ಪಾಕಿಸ್ತಾನ ಸೇನೆ ಸೋಮವಾರ ಒಂದೇ ದಿನದಲ್ಲಿ ಎರಡನೇ ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಹಲವು ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಭಾರತೀಯ ಸೇನೆ ಪಾಕ್ ಗೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಇಂದು ಬೆಳಗ್ಗೆಯಷ್ಟೇ ಪೂಂಚ್ ಮತ್ತು ರಾಜೋಚಿ ಜಿಲ್ಲೆಯಲ್ಲಿ ಪಾಕ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರಲ್ಲದೆ ಒಂಬತ್ತು ವರ್ಷದ ಬಾಲಕಿ ಸಹ ಮೃತಪಟ್ಟಿದ್ದಾಳೆ.
ಭಾರತ ಮತ್ತು ಪಾಕಿಸ್ತಾನ ಗಡಿಗಳಲ್ಲಿ ಪದೇ ಪದೇ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ, ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಇಂದು ಉಭಯ ದೇಶದ ಸೇನಾ ಮುಖ್ಯಸ್ಥರು ಡಿಜಿಎಂಒ ಸಭೆ ನಡೆಸಿ, ಮಾತುಕತೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


