ಜನಪ್ರತಿನಿಧಿಗಳಿಗೆ ಕನಿಷ್ಟ ವಿದ್ಯಾಭ್ಯಾಸ ಕಡ್ಡಾಯ ಕೋರಿ ಪಿಐಎಲ್: ಸುಪ್ರೀಂ ನಿಂದ ಅರ್ಜಿ ವಜಾ!
ಜನಪ್ರತಿನಿಧಿಗಳಿಗೆ ಕನಿಷ್ಟ ವಿದ್ಯಾಭ್ಯಾಸ ಕಡ್ಡಾಯಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಕಿ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನವದೆಹಲಿ: ಜನಪ್ರತಿನಿಧಿಗಳಿಗೆ ಕನಿಷ್ಟ ವಿದ್ಯಾಭ್ಯಾಸ ಕಡ್ಡಾಯಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಕಿ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಈ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಜನಪ್ರತಿನಿಧಿಗಳಿಗೆ ಕನಿಷ್ಠ ವಿದ್ಯಾಭ್ಯಾಸ ಕಡ್ಡಾಯಗೊಳಿಸುವ ವಿಚಾರ ನ್ಯಾಯಾಲಯದ ವಿವೇಚನೆಗೆ ಬರುವುದಿಲ್ಲ. ಆದರೆ ಸಂಸತ್ ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
ಈ ಹಿಂದೆ 2017 ಏಪ್ರಿಲ್ 19ರಂದು ಜಮ್ಮು ಮತ್ತು ಕಾಶ್ಮೀರದ ಎಲ್ ಇ ಹೆಚ್ ಮೂಲದ ವಕೀಲ ಅಖೈಲ್ ಅಹ್ಮದ್ ಎಂಬುವವರು ಜನಪ್ರತಿನಿಧಿಗಳಿಗೆ ಕನಿಷ್ಟ ವಿದ್ಯಾಭ್ಯಾಸ ಕಡ್ಡಾಯಗೊಳಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಮಹಮದ್ ಯಾಕೂಬ್ ಮೀರ್ ಮತ್ತು ಧಿರಾಜ್ ಸಿಂಗ್ ಠಾಕೂರ್ ಅವರ ನೇತೃತ್ವದ ದ್ವಿಸದಸ್ಯ ಪೀಠ, ಈ ವಿಚಾರ ಸಂಸದೀಯ ವ್ಯವಹಾರಗಳ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಈ ಬಗ್ಗೆ ತಾನು ಆದೇಶ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿತ್ತು.
ಬಳಿಕ ವಕೀಲ ಅಖೈಲ್ ಅಹ್ಮದ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು, ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


