ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ: ವೆಂಕಯ್ಯ ನಾಯ್ಡು ಹೆಸರು ಮುಂಚೂಣಿಯಲ್ಲಿ
ಉಪರಾಷ್ಟ್ರಪತಿ ಹುದ್ದೆಗೆ ಈ ಬಾರಿ ದಕ್ಷಿಣ ಭಾರತದವರನ್ನು ಆಯ್ಕೆ ಮಾಡಬೇಕೆಂಬ ಉದ್ದೇಶ ಇದೆ ಎಂದು ವಿಶ್ಲೇಷಿಸಲಾಗುತ್ತಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಎನ್ ಡಿಎ

Published On :
ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಈ ಬಾರಿ ದಕ್ಷಿಣ ಭಾರತದವರನ್ನು ಆಯ್ಕೆ ಮಾಡಬೇಕೆಂಬ ಉದ್ದೇಶ ಇದೆ ಎಂದು ವಿಶ್ಲೇಷಿಸಲಾಗುತ್ತಿದ್ದು, ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ವೆಂಕಯ್ಯ ನಾಯ್ಡು ಎನ್ ಡಿಎ ಅಭ್ಯರ್ಥಿಯಾಗುವ ಸಾಧ್ಯತೆಗಳು ದಟ್ಟವಾಗಿವೆ.
ಜು.17 ರಂದು ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ವೆಂಕಯ್ಯ ನಾಯ್ಡು ಅವರ ಹೆಸರು ಮುಂಚೂಣಿಯಲ್ಲಿದ್ದು, ಅವರನ್ನೇ ಆಯ್ಕೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಇದೆ. ಇದಕ್ಕೆ ಪೂರಕವೆಂಬಂತೆ ವೆಂಕಯ್ಯ ನಾಯ್ಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎಂ ವೆಂಕಯ್ಯ ನಾಯ್ಡುM. Venkaiah NaiduNDA candidateಎನ್ ಡಿಎ ಅಭ್ಯರ್ಥಿಉಪರಾಷ್ಟ್ರಪತಿ ಚುನಾವಣೆVice Presidential poll
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


