ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: ಮೂವರು ಉಗ್ರರನ್ನು ಸದೆಬಡಿದ ಸೇನೆ
ದಕ್ಷಿಣ ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಪಡೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ...

Published On :
ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್'ನಾಗ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿರುವುದಾಗಿ ರಕ್ಷಣಾಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಕಳೆದ ರಾತ್ರಿ 8 ಸುಮಾರಿಗೆ ಅನಂತ್'ನಾಗ್ ಜಿಲ್ಲೆಯ ವಾನಿಹಮಾ ಗ್ರಾಮದಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರ ವಿರುದ್ಧ ಸೇನಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಭಾರತೀಯ ಸೇನೆ ಕಾರ್ಯಾಚರಣೆಗಿಳಿಯುತ್ತಿದ್ದಂತೆಯೇ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ ಭದ್ರತಾ ಸಿಬ್ಬಂದಿಗಳು ದಾಳಿಗೆ ದಿಟ್ಟ ಉತ್ತರ ನೀಡುವ ಮೂಲಕ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ರಕ್ಷಣಾ ವಕ್ತಾರರರು ತಿಳಿಸಿದ್ದಾರೆ.
ಈ ನಡುವೆ ಉಗ್ರರು ದಾಳಿ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿ ವೇಳೆ ಮಾಜಿ ಪಂಚಾಯಿತಿ ಮುಖ್ಯಸ್ಥರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ.
ನಾಜಿರ್ ಅಹ್ಮದ್ ಶಾ ಎಂಬ ಮಾಜಿ ಪಂಚಾಯಿತಿ ಮುಖ್ಯಸ್ಥರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಹ್ಮದ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಮತ್ತು ಬಿಂಬರ್ ಗಲಿಯಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹತ್ಯೆಉಗ್ರರುAnantNagಜಮ್ಮು ಮತ್ತು ಕಾಶ್ಮೀರTerror AttackArmyJammu and KashmirencounterterroristKilledಸೇನೆಉಗ್ರರ ದಾಳಿಎನ್ ಕೌಂಟರ್ಅನಂತ್ ನಾಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


