ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ - ಸೇನೆಯಿಂದ ದಿಟ್ಟ ಉತ್ತರ
ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಮತ್ತು ಪೂಂಚ್ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಸೇನೆ ಹಾಗೂ ನಾಗರಿಕ ಪ್ರದೇಶಗಳನ್ನು ಗುರಿಯಾಗಿರಿಸಿಕೊಂಡಿರುವ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ವಕ್ತಾರ ಹೇಳಿದ್ದಾರೆ.
ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿರವ ನಿವಾಸಿಗಳಿಗೆ ಮನೆಯಿಂದ ಹೊರಬರದಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ನಾಗರಿಕರು ಮನೆಗಳಿಂದ ಹೊರಗೆ ಬಾರದಂತೆ ನೋಡಿಕೊಳ್ಳಲು ಸಿಬ್ಬಂದಿಗಳನ್ನು ಸ್ಥಳಗಳಲ್ಲಿ ನಿಯೋಜಿಸಲಾಗುತ್ತಿದೆ ಎಂದು ರಜೌರಿ ಉಪ ಆಯುಕ್ತ ಶಾಹಿದ್ ಇಕ್ಬಾಲ್ ಚೌಧರಿಯವರು ಹೇಳಿದ್ದಾರೆ.
ರಜೌರಿ ಮತ್ತು ಪೂಂಚ್ ಗಡಿಯಲ್ಲಿರುವ ಪಂಜ್ಗ್ರೈನ್, ರಜ್ಧಾನಿ ಮತ್ತು ನೈಕಾ ಗ್ರಾಮಗಳಲ್ಲಿ ಒಟ್ಟು 4,500 ದಿಂದ 5,000 ಜನಸಂಖ್ಯೆಯಿದ್ದು, ನಾಗರಿಕ ಪ್ರದೇಶಗಳ ಮೇಲೆಯೇ ಪಾಕಿಸ್ತಾನ ಸೇನೆ ಶೆಲ್ ಗಳ ದಾಳಿ ನಡೆಸುತ್ತಿದೆ. ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ತಿಳಿಸಿದ್ದಾರೆ.
ರಜೌರಿಯ ಭಿಂಬೆರ್ ಗಾಲಿ ಮತ್ತು ಪೂಂಚ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸಣ್ಣ ಶಸ್ತ್ರಾಸ್ತ್ರಗಳು, ಆಟೋಮೆಟಿಕ್ ಶಸ್ತ್ರಾಸ್ತ್ರಗಳು ಮತ್ತು ಮಾರ್ಟರ್ ಶೆಲ್ ಗಳ ದಾಳಿ ನಡೆಸುತ್ತಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಮತ್ತು ಬಿಂಬರ್ ಗಲಿಯಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


