ಗೋವಾದಲ್ಲಿ ಗೋಮಾಂಸ ಕೊರತೆಯಾಗದಂತೆ ನೋಡಿಕೊಳ್ಳುವೆ: ಮನೋಹರ್ ಪರಿಕ್ಕರ್, ಕಾಂಗ್ರೆಸ್ ವ್ಯಂಗ್ಯ
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗೋವಾದಲ್ಲಿ ಗೋಮಾಂಸದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ...

Published On :
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗೋವಾದಲ್ಲಿ ಗೋಮಾಂಸದ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಗೋವಾದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು ಇಂದು ಸದನದಲ್ಲಿ ಮಾತನಾಡಿದ ಪರಿಕ್ಕರ್ ಅವರು ಗೋವಾದಲ್ಲಿ ಗೋಮಾಂಸ ಕೊರೆತೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಒಂದು ವೇಳೆ ಗೋಮಾಂಸದ ಅಭಾವ ಉಂಟಾದಲ್ಲಿ ನೆರೆಯ ರಾಜ್ಯಗಳಿಂದ ಗೋಮಾಂಸವನ್ನು ಆಮದು ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಇನ್ನು ರಾಜ್ಯದಲ್ಲಿ ಗೋಮಾಂಸ ಕೊರತೆಯಾದಲ್ಲಿ ಬೆಳಗಾವಿ ಹಾಗೂ ಇನ್ನಿತರ ಸ್ಥಳಗಳಿಂದ ಗೋಮಾಂಸವನ್ನು ತರಿಸುವ ಆಯ್ಕೆ ನಮ್ಮ ಮುಂದಿದೆ. ಅಲ್ಲದೆ ಹೊರ ರಾಜ್ಯಗಳಿಂದ ಬರುವ ಗೋಮಾಂಸದ ಗುಣಮಟ್ಟವನ್ನು ತಜ್ಞ ವೈದ್ಯರ ತಂಡವು ಪರಿಶೀಲಿಸುವುದು ಎಂದು ಹೇಳಿದರು.
ಗೋವಾದಲ್ಲಿ ಗೋಮಾಂಸದ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂಬ ಪರಿಕ್ಕರ್ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಅವರು ಇದೊಂದು ಹಾಸ್ಯಾಸ್ಪದ ಹೇಳಿಕೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


