ದೇಶ

ರಾಜಸ್ತಾನದಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರ ಸಾವು, 15 ಮಂದಿಗೆ ಗಂಭೀರ ಗಾಯ

ರಾಜಸ್ತಾನದಲ್ಲಿ ಮಂಗಳವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದ್ವಿಚಕ್ರ ವಾಹನ ಬಿಡಿಭಾಗಗಳ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ತಾನದಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರ ಸಾವು, 15 ಮಂದಿಗೆ ಗಂಭೀರ ಗಾಯ
ಅಂಗಡಿಗೆ ಬೆಂಕಿ
Published On :

ಜೈಪುರ: ರಾಜಸ್ತಾನದಲ್ಲಿ ಮಂಗಳವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದ್ವಿಚಕ್ರ ವಾಹನ ಬಿಡಿಭಾಗಗಳ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.

ರಾಜಸ್ತಾನದ ಕೋಟಾದಲ್ಲಿ ಕಳೆದ ತಡರಾತ್ರಿಯಲ್ಲಿ ಈ ಘಟನೆ ಸಂಭವಿಸಿದ್ದು, ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ  ಪೈಕಿ ಮೂವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅಂಗಡಿಯಲ್ಲಿ ಇತ್ತು ಎನ್ನಲಾಗುತ್ತಿರುವ 7 ಸಿಲಿಂಡರ್ ಗಳೂ ಕೂಡ ಸ್ಫೋಟವಾಗಿರುವುದು ಅಗ್ನಿ ದುರಂತದ ಭೀಕರತೆಯನ್ನು ಹೆಚ್ಚಿಸಿದೆ ಎಂದು  ಹೇಳಲಾಗುತ್ತಿದೆ.

ಪ್ರಸ್ತುತ ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾಯಕದಲ್ಲಿ ತೊಡಗಿದ್ದು, ಸತತ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.