ಅಮರನಾಥ ಯಾತ್ರೆ: ಮೃತ ಯಾತ್ರಾರ್ಥಿಗಳ ಸಂಖ್ಯೆ 48ಕ್ಕೆ ಏರಿಕೆ
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದಾಗಿರುವ ಅಮರನಾಥ ಯಾತ್ರೆಯಲ್ಲಿ ಪ್ರಸಕ್ತ ವರ್ಷ ಯಾತ್ರಿಕರ ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ...

Published On :
ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದಾಗಿರುವ ಅಮರನಾಥ ಯಾತ್ರೆಯಲ್ಲಿ ಪ್ರಸಕ್ತ ವರ್ಷ ಯಾತ್ರಿಕರ ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
60 ವರ್ಷದ ಮಧ್ಯಪ್ರದೇಶದ ಯಾತ್ರಿಕ ರಾಮೇಶ್ವರ ಪತಿದಾರ್ ಎಂಬುವವರು ನಿನ್ನೆ ಸಂಜೆ ಪಹಲ್ ಗಾಂವ್ ನನ್'ವಾನ್ ಮೂಲ ಶಿಬಿರಕ್ಕೆ ಪಿಸೂ ಶಿಖರಿಂದ ಹಿಂತಿರುಗಿ ಬರುವಾಗ ಕೊನೆಯುಸಿರೆಳೆದಿದ್ದಾರೆ. ಇದರಂತೆ ಯಾತ್ರಿಕರ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಯಾತ್ರೆಯಲ್ಲಿ ಈ ವರೆಗೂ ನೈಸರ್ಗಿಕ ಕಾರಣಗಳಿಂದಾಗಿ ಮೃತಪಟ್ಟವರು 20 ಆಗಿದ್ದರೆ, ಉಗ್ರರ ದಾಳಿಯಲ್ಲಿ 8 ಯಾತ್ರಿಕರು ಹಾಗೂ ಅಪಘಾತ ಸೇರಿದಂದೆ ಇತರೆ ಪ್ರಕರಣಗಳಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆಂದು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


