ದೇಶ

ಐಎನ್​ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂಗೆ ಸಿಬಿಐ ಸಮನ್ಸ್

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ....

ಐಎನ್​ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂಗೆ ಸಿಬಿಐ ಸಮನ್ಸ್
ಕಾರ್ತಿ ಚಿದಂಬರಂ
Published On :
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಸಿಬಿಐ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರಿಗೆ ಸಿಬಿಐ ಇಂದು ಮೂರನೇ ಬಾರಿ ಸಮನ್ಸ್ ಜಾರಿ ಮಾಡಿದ್ದು, ಶುಕ್ರವಾರ ದಕ್ಷಿಣ ದೆಹಲಿಯ ರೋಧಿ ರಸ್ತೆಯಲ್ಲಿ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಐಎನ್‌ಎಕ್ಸ್‌ ಮಾಧ್ಯಮ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್‌ ಅವರನ್ನು ವಿಚಾರಣೆ ನಡೆಸಲು ಸಿಬಿಐ ಉದ್ದೇಶಿಸಿದೆ.
ಈ ಹಿಂದೆ ಕಾರ್ತಿ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಜೂನ್ 27 ಮತ್ತು 29ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿದೇಶದಲ್ಲಿರುವ ಕಾರ್ತಿ ಚಿದಂಬರಂ ಅವರು ತಮ್ಮ ವಕೀಲರ ಮೂಲಕ ವಿಚಾರಣೆಗೆ ಹಾಜರಾಗಲು ಕಾಲವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.