ದೇಶ

ಸಂಸತ್ ಅಧಿವೇಶನ: ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ವಿಪಕ್ಷಗಳಿಗೆ ಕೇಂದ್ರ ಮನವಿ

ಮೂರನೇ ದಿನದ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳು ಭಾರೀ ಗದ್ದಲ ನಡೆಸುತ್ತಿರುವ ಹಿನ್ನಲೆಯಲ್ಲಿ ಉಭಯ ಸದನಗಳಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ವಿರೋಧ ಪಕ್ಷಗಳಿಗೆ ಕೇಂದ್ರ...

ಸಂಸತ್ ಅಧಿವೇಶನ: ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ವಿಪಕ್ಷಗಳಿಗೆ ಕೇಂದ್ರ ಮನವಿ
ಸಂಗ್ರಹ ಚಿತ್ರ
Published On :
ನವದೆಹಲಿ: ಮೂರನೇ ದಿನದ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷಗಳು ಭಾರೀ ಗದ್ದಲ ನಡೆಸುತ್ತಿರುವ ಹಿನ್ನಲೆಯಲ್ಲಿ ಉಭಯ ಸದನಗಳಲ್ಲಿ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುವಂತೆ ವಿರೋಧ ಪಕ್ಷಗಳಿಗೆ ಕೇಂದ್ರ ಸರ್ಕಾರ ಬುಧವಾರ ಮನವಿ ಮಾಡಿದೆ. 
ಉಭಯ ಸದನಗಳಲ್ಲಿ ವಿಪಕ್ಷಗಳು ಉಂಟು ಮಾಡುತ್ತಿರುವ ತೀವ್ರ ಗದ್ದಲ ಹಿನ್ನಲೆಯಲ್ಲಿ ಇಂದು ಬಿಜೆಪಿ ಸಂಸದೀಯ ಸಭೆಯನ್ನು ನಡೆಸಲಾಯಿತು. ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರು, ರೈತರ ಸಮಸ್ಯೆ ಸೇರಿದಂತೆ ವಿರೋಧ ಪಕ್ಷಗಳು ಆಗ್ರಹಿಸುವ ಪ್ರತಿಯೊಂದು ವಿಚಾರದ ಕುರಿತಂತೆಯೂ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ. ವಿರೋಧ ಪಕ್ಷಗಳು ಸುಗಮ ಕಲಾಪಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದ್ದಾರೆ. 
ಉಭಯ ಸದನಗಳ ಕಲಾಪಗಳು ಸುಮಗವಾಗಿ ಸಾಗುವಂತೆ ವಿರೋಧ ಪಕ್ಷಗಳು ಸಹಕಾರ ನೀಡಬೇಕೆಂದು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಎಲ್ಲಾ ವಿಚಾರಗಳ ಬಗ್ಗೆಯೂ ಮನವೊಲಿಕೆಯ ಮಾರ್ಗದಲ್ಲಿ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆಂದು ತಿಳಿಸಿದ್ದಾರೆ. 
ಇದೇ ವೇಳೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್'ಟಿ) ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕೊಂಡಾಡಿರುವ ಅವರು, ಜಿಎಸ್'ಟಿ ಜನರ ಹಿತಾಸಕ್ತಿ ಮತ್ತು ರಾಜ್ಯ ಮತ್ತು ದೇಶದ ಅಭಿವೃದ್ಧಿಗಾಗಿ ಆಗಿದೆ. ಸರಾಗವಾಗಿ ಜಿಎಸ್ ಟಿಯನ್ನು ಜಾರಿಗೆ ತರಲಾಗಿದ್ದು, ದೇಶದ ಅಭಿವೃದ್ಧಿಗೆ ಜಿಎಸ್'ಟಿ ಸಹಾಯವಾಗಲಿದೆ ಎಂದಿದ್ದಾರೆ. 
ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಹಾಗೂ ಇನ್ನಿತರೆ ನಾಯಕರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.