ರಾಜ್ಯಸಭೆಯಲ್ಲಿ ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ ರಾಜೀನಾಮೆ ಅಂಗೀಕಾರ
ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿಯವರು ಗುರುವಾರ ಆಂಗೀಕರಿಸಿದ್ದಾರೆ...

Published On :
ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿಯವರ ರಾಜೀನಾಮೆಯನ್ನು ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿಯವರು ಗುರುವಾರ ಆಂಗೀಕರಿಸಿದ್ದಾರೆ.
ದಲಿತರ ವಿಷಯಗಳ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಹೇಳಿ ತೀವ್ರವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದ ಮಾಯಾವತಿಯವರು, ಎರಡು ದಿನಗಳ ಹಿಂದಷ್ಟೇ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆಯನ್ನು ನೀಡಿದ್ದರು. ಮಾಯಾವತಿಯರು ತಮ್ಮ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಉಪ ಸಭಾಪತಿ ಪಿ.ಜೆ.ಕುರಿಯನ್ ಹೇಳಿದ್ದರು.
ಇದಕ್ಕೆ ಲಿಖಿತ ಪತ್ರದ ಮೂಲಕ ಪ್ರತಿಕ್ರಿಯೆ ನೀಡಿದ್ದ ಮಾಯಾವತಿಯವರು ಮತ್ತೆ ಮರು ರಾಜೀನಾಮೆ ಸಲ್ಲಿಸಿದ್ದರು. ಈ ರಾಜೀನಾಮೆ ಪತ್ರವನ್ನು ಇದೀಗ ರಾಜ್ಯಸಭಾ ಅಧ್ಯಕ್ಷ ಹಮೀದ್ ಅನ್ಸಾರಿಯವರು ಅಂಗೀಕರಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


