ದೇಶ

ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್‌ ಆಯ್ಕೆ

ಜುಲೈ 17ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್‌ ಅವರು....

ಭಾರತದ 14ನೇ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್‌ ಆಯ್ಕೆ
ಗೆಲುವು ಸಾಧಿಸಿದ ನಂತರ ರಾಮನಾಥ್ ಕೋವಿಂದ್ ಅವರನ್ನು ಅಭಿನಂದಿಸುತ್ತಿರುವ ಪ್ರಧಾನಿ ಮೋದಿ, ಅಮಿತ್ ಶಾ
Published On :
ನವದೆಹಲಿ: ಜುಲೈ 17ರಂದು ನಡೆದ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಆಡಳಿತರೂಢ ಎನ್‌ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್‌ ಅವರು ಶೇ.65.65 ರಷ್ಟು ಮತಗಳನ್ನು ಪಡೆದು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ರಾಮನಾಥ್ ಕೋವಿಂದ್ ಅವರು, 7,02,044 ಮತಗಳೊಂದಿಗೆ ಭರ್ಜರಿ ಜಯ ಸಾಧಿಸಿದ್ದಾರೆ. 
ಇನ್ನು ಪ್ರತಿಸ್ಪರ್ಧಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್‌ ಅವರು 3, 67, 314 ಮತಗಳನ್ನು ಮತಗಳನ್ನು ಪಡೆದಿದ್ದು, ರಾಮನಾಥ್ ಕೋವಿಂದ್ ಅವರು 3,34, 730 ಮತಗಳ ಅಂತರಿಂದ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿ ಅನೂಪ್‌ ಮಿಶ್ರಾ ಅವರು ಘೋಷಿಸಿದ್ದಾರೆ.
ಕಳೆ ಸೋಮವಾರ ಸಂಸತ್ ಭವನ ಸೇರಿ ಒಟ್ಟು 32 ಮತಗಟ್ಟೆಗಳಲ್ಲಿ ಮತದಾನ ನಡೆದಿತ್ತು,  ಭಾರತದ 14ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಶೇ.99 ರಷ್ಚು ಮತದಾನವಾಗಿತ್ತು. 15 ರಾಜ್ಯಗಳಲ್ಲಿ ಶೇ. 100 ರಷ್ಚು ಮತದಾನವಾಗಿತ್ತು.
ಇನ್ನು ಈ ಬಗ್ಗೆ ಬೆಳಗ್ಗೆ ಪ್ರತಿಕ್ರಿಯಿಸಿದ್ದ ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ಅವರು, ನಾನು ಅತ್ಯಂತ ವಿಶ್ವಾಸ, ನಂಬಿಕೆ ಹಾಗೂ ಭರವಸೆಯೊಂದಿಗೆ 14ನೇ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.