ಕದನ ವಿರಾಮ ಉಲ್ಲಂಘನೆ: ಭಾರತೀಯ ರಾಯಭಾರಿ ಕಚೇರಿಗೆ ಪಾಕ್ ಸಮನ್ಸ್
ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ಮಾಡಿದೆ ಎಂದು ಆರೋಪಿಸಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಪಾಕಿಸ್ತಾನದಲ್ಲಿನ...

Published On :
ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ಮಾಡಿದೆ ಎಂದು ಆರೋಪಿಸಿ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಪಾಕಿಸ್ತಾನದಲ್ಲಿನ ಭಾರತೀಯ ರಾಯಭಾರಿ ಕಚೇರಿಗೆ ಅಧಿಕಾರಿ ಜೆಪಿ ಸಿಂಗ್ ಅವರಿಗೆ ಸಮನ್ಸ್ ನೀಡಿದೆ.
ನಿನ್ನೆ ಭಾರತ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನದ ನಿಕೈಲ್ ಮತ್ತು ನೇಜಾಫಿರ್ ಸೆಕ್ಟರ್ ಬಳಿ ಗುಂಡಿನ ದಾಳಿ ನಡೆಸಿದ್ದು ಈ ಗುಂಡಿನ ದಾಳಿಯಲ್ಲಿ ಇಬ್ಬರು ಸಾರ್ವಜನಿಕರು ಮೃತಪಟ್ಟಿದ್ದು ಇನ್ನು ಐವರು ಗಾಯಗೊಂಡಿದ್ದಾರೆ ಎಂದು ಸಾರ್ಕ್ ನ ಪ್ರಧಾನ ನಿರ್ದೇಶಕ ಡಾ. ಮೊಹಮ್ಮದ್ ಫೈಜಲ್ ಹೇಳಿದ್ದಾರೆ.
ಭಾರತ 2003ರ ಕದನ ವಿರಾಮ ವ್ಯವಸ್ಥೆಯನ್ನು ಗೌರವಿಸಬೇಕು ಮತ್ತು ನಿನ್ನೆಯ ಕದನ ವಿರಾಮ ಮತ್ತು ಹಿಂದಿನ ಎಲ್ಲಾ ಕದನ ವಿರಾಮ ಪ್ರಕರಣಗಳ ತನಿಖೆ ನಡೆಸಬೇಕು ಎಂದು ಮೊಹಮ್ಮದ್ ಫೈಜಲ್ ಆಗ್ರಹಿಸಿದ್ದಾರೆ.
ಭಾರತೀಯ ಯೋಧರು ಕದನ ವಿರಾಮ ವ್ಯವಸ್ಥೆಯನ್ನು ಗೌರವಿಸುವ ಮೂಲಕ ಗಡಿಯಲ್ಲಿ ಶಾಂತಿ ನೆಲೆಸಲು ಸಹಕರಿಸಬೇಕು ಎಂದು ಮೊಹಮ್ಮದ್ ಫೈಜಲ್ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


